ತುಮಕೂರು: ನಾಸೀರ್ ಹುಸೇನ್ ಬೆಂಬಲಿಗರು ಗೆಲುವಿನ ಸಂಭ್ರಮದ ನಡುವೆ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿರೋ ಆರೋಪಗಳು ಕೇಳಿ ಬಂದಿದೆ. ವಿಧಾನಸೌಧದ ಆವರಣದಲ್ಲಿ ನಾಸಿರ್ ಹುಸೇನ್ ಬೆಂಬಲಿಗರು ಘೋಷಣೆ ಕೂಗಿದ್ದಾರೆ ಎನ್ನಲಾಗಿದೆ. ಈ ಘಟನೆ ಸದ್ಯ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಘಟನೆ ಸಂಬಂಧ ತುಮಕೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು.
ಈ ವೇಳೆ ತುಮಕೂರು ಡಿ ವೈ ಎಸ್ ಪಿ ಮೇಲೆ ಕಾರ್ಯಕರ್ತರು ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆಯ ವೇಳೆ ಡಿವೈಎಸ್ಪಿ ಮೇಲೆ ಹಲ್ಲೆ ನಡೆದಿದೆ ಎಂದು ಹೇಳಲಗುತ್ತಿದೆ. ತುಮಕೂರು ನಗರ ಡಿವೈಎಸ್ಪಿ ಚಂದ್ರಶೇಖರ್ ಮೇಲೆ ಹಳೆ ನಡೆಸಿದಲ್ಲದೆ ನೂಕಾಟ ತಳ್ಳಟ ನಡೆಸಿದ್ದು, ಇದೆ ವೇಳೆ ಡಿವೈಎಸ್ಪಿ ಚಂದ್ರಶೇಖರ್ ಮೂಗಿಗೆ ಗಾಯವಾಗಿದೆ.ಮುಗಿಗೆ ರಕ್ತ ಬರುವಂತೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.