ತುಮಕೂರು:- ನನ್ನನ್ನು ಸೋಲಿಸಲು ಮೈತ್ರಿ ನಾಯಕರು ಸಂಚು ರೂಪಿಸಿದ್ದಾರೆ ಎಂದು ಸಂಸದ ಡಿಕೆ ಸುರೇಶ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕನ್ನಡ ನಾಡಿನ ಅಭಿವೃದ್ಧಿಗಾಗಿ, ರೈತರ ಪ್ರಗತಿಗಾಗಿ ಅಲ್ಲ. ನನ್ನನ್ನು ಸೋಲಿಸಿ ದೇವೇಗೌಡರ ಮಗ ಮತ್ತು ಅಳಿಯನ ಗೆಲುವಿಗಾಗಿ ಎಂದರು.
MP Election: ಮಂಡ್ಯದಲ್ಲಿ HD ರೇವಣ್ಣ ಸ್ಪರ್ಧೆ – ಕುಮಾರಸ್ವಾಮಿ ವಿರುದ್ಧ ನಿಂತಿರುವ ಈ ವ್ಯಕ್ತಿ ಯಾರು!?
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಹತ್ತು ವರ್ಷ, ಎಂಟು ತಿಂಗಳು ಮೂರು ಬಾರಿ ಸಂಸದನಾಗಿ ಆಯ್ಕೆಯಾಗಿ ಮತದಾರರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೆ. ಚುನಾವಣೆಗಾಗಿ ರಾಜಕಾರಣ ಮಾಡದೇ ಅಭಿವೃದ್ಧಿಗಾಗಿ ಶ್ರಮಿಸಿರುವೆ. ತಾಲ್ಲೂಕಿಗೆ ಹೇಮಾವತಿ ನೀರಿನ ವಿಚಾರದಲ್ಲಿ 25 ವರ್ಷಗಳಿಂದ ಅನ್ಯಾಯವಾಗಿದೆ. 950 ಕೋಟಿ ರೂ. ವೆಚ್ಚದ ಸಂಪರ್ಕ ಕಾಲುವೆ ಯೋಜನೆ ಅನುಷ್ಠಾನದ ಮೂಲಕ ಇದನ್ನು ಸರಿಪಡಿಸಲಾಗಿದೆ ಎಂದರು.
ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಟ್ಟ ಹೆಚ್.ಡಿ.ಕುಮಾರಸ್ವಾಮಿ ಅವರ ಬಾವನನ್ನು ಜೆಡಿಎಸ್ನಿಂದ ಕಣಕ್ಕಿಳಿಸದೇ, ಬಿಜೆಪಿಯಿಂದ ಕಣಕ್ಕಿಳಿಸಿ ನನ್ನನ್ನು ಸೋಲಿಸಲು ಸಂಚು ರೂಪಿಸಿದ್ದಾರೆ ಎಂದು ಟೀಕಿಸಿದರು.