ನಟ ಅಲ್ಲು ಅರ್ಜುನ್, ಪುಷ್ಪ 2’ ಯಶಸ್ಸಿನಲ್ಲಿ ನಾನಾ ಕಡೆಗಳಿಗೆ ತೆರಳಿ ಸಕ್ಸಸ್ ಮೀಟ್ನಲ್ಲಿ ಭಾಗಿ ಆಗುತ್ತಿದ್ದಾರೆ. ಹೀಗಿರುವಾಗಲೇ ಡಿಸೆಂಬರ್ 4ರಂದು ಹೈದರಾಬಾದ್ನ ಸಂಧ್ಯಾ ಥಿಯೇಟರ್ನಲ್ಲಿ ನಡೆದ ಕಾಲ್ತುಳಿತ ಘಟನೆಗೆ ಸಂಬಂಧಿಸಿ ಅವರು ಡಿಸೆಂಬರ್ 13ರಂದು ಬಂಧನಕ್ಕೆ ಒಳಗಾಗಿ, ಇಂದು (ಡಿಸೆಂಬರ್ 15) ಬಿಡುಗಡೆ ಹೊಂದಿದ್ದಾರೆ. ತೆಲಂಗಾಣ ಹೈಕೋರ್ಟ್ ಅಲ್ಲು ಅರ್ಜುನ್ಗೆ ಮಧ್ಯಂತರ ಜಾಮೀನು ನೀಡಿದೆ. ರಾತ್ರಿ ಇಡೀ ಜೈಲಿನಲ್ಲೇ ಇದ್ದ ಅಲ್ಲು ಅರ್ಜುನ್ ಅವರು ಇಂದು ಬಿಡುಗಡೆ ಹೊಂದಿದ್ದಾರೆ.
ವಿರಾಟ್ ಹೆಸರಿಗೆ ಮತ್ತೊಂದು ದಾಖಲೆ: ಈ ಸಾಧನೆ ಮಾಡಿದ ವಿಶ್ವದ 2ನೇ ಆಟಗಾರ ಕಿಂಗ್ ಕೊಹ್ಲಿ!
ಕೆಳ ಹಂತದ ಕೋರ್ಟ್ ಅವರಿಗೆ 14 ದಿನ ನ್ಯಾಯಂಗ ಬಂಧನ ವಿಧಿಸಿದರೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಆದರೆ, ಕೋರ್ಟ್ ಪ್ರತಿ ಜೈಲು ಸೇರದ ಹಿನ್ನೆಲೆಯಲ್ಲಿ ಅವರ ಬಿಡುಗಡೆ ತಡವಾಗಿದೆ. ಬನ್ನಿ ರಾತ್ರಿಯಿಡೀ ಜೈಲಿನಲ್ಲೇ ಕಳೆದಿದ್ದಾರೆ. ಮುಂಜಾನೆ ಅವರು ಬಿಡುಗಡೆ ಹೊಂದಿದ್ದಾರೆ.
ಸಂಧ್ಯಾ ಥಿಯೇಟರ್ ಘಟನೆ ಹಿನ್ನೆಲೆಯಲ್ಲಿ ಪೊಲೀಸರು ಅಲ್ಲು ಅರ್ಜುನ್ ಅವರನ್ನು ಆರೋಪಿ ಸ್ಥಾನದಲ್ಲಿ ಇರಿಸಿದ್ದಾರೆ. ‘ಪುಷ್ಪ 2’ ಚಿತ್ರದ ಪ್ರೀಮೀಯರ್ ಪ್ರದರ್ಶನದ ವೇಳೆ ಅಲ್ಲು ಅರ್ಜುನ್ ಸಂಧ್ಯಾ ಥಿಯೇಟರ್ಗೆ ಹೋಗಿದ್ದರು. ಅಲ್ಲು ಅರ್ಜುನ್ ಆಗಮನದಿಂದ ಅಭಿಮಾನಿಗಳು ಒಮ್ಮೆಲೇ ಮುಗಿಬಿದ್ದರು. ಈ ಕಾರಣಕ್ಕೆ ಕಾಲ್ತುಳಿತ ಉಂಟಾಯಿತು. ಈ ಕಾಲ್ತುಳಿತದಲ್ಲಿ ರೇವತಿ ಹೆಸರಿನ ಮಹಿಳೆ ಸಾವನ್ನಪ್ಪಿದ್ದರು. ಅವರ ಮಗನಿಗೆ ಗಾಯಗಳಾಗಿವೆ. ಈ ಘಟನೆಗೆ ಸಂಬಂಧಿಸಿ ರೇವತಿ ಪತಿ ದೂರು ಮಾಡಿದ್ದರು. ಈ ಬೆನ್ನಲ್ಲೇ ಎಫ್ಐಆರ್ ದಾಖಲಿಸಿರುವ ಪೊಲೀಸರು, ಅಲ್ಲು ಅರ್ಜುನ್ ಅವರನ್ನು ಎ11 ಆರೋಪಿ ಆಗಿ ಮಾಡಿದ್ದಾರೆ. ಜೊತೆಗೆ ಅವರನ್ನು ಬಂಧಿಸಲಾಗಿದೆ.
ಬಳಿಕ ಜಾಮೀನು ಸಿಕ್ಕ ಬೆನ್ನಲ್ಲೇ ರಿಲೀಸ್ ಮಾಡಲಾಗಿದೆ.