ನಟ ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್ ಇತ್ತೀಚೆಗೆ ಸಿಂಪಲ್ ಆಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಕುಟುಂಬಸ್ಥರ ಸಮ್ಮುಖದಲ್ಲಿ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. ತಂದೆ ಹುಟ್ಟುಹಬ್ಬಕ್ಕೆ ಅಲ್ಲು ಅರ್ಜುನ್ ವಿಶೇಷವಾಗಿ ಶುಭ ಹಾರೈಸಿದ್ದಾರೆ.
76ನೇ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ತಂದೆಗೆ ‘ಪುಷ್ಪ ಕಾ ಬಾಪ್’ ಎಂದು ಕೇಕ್ ಮೇಲೆ ಬರೆದು ಅಲ್ಲು ಅರ್ಜುನ್ ವಿಶೇಷವಾಗಿ ಶುಭಹಾರೈಸಿದ್ದಾರೆ. ಹ್ಯಾಪಿ ಬರ್ತ್ಡೇ ಎಂದು ನಟ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ.
ನಿರ್ಮಾಪಕ ಅಲ್ಲು ಅರವಿಂದ್ ಕುಟುಂಬಸ್ಥರ ಜೊತೆ ಕೇಕ್ ಕತ್ತರಿಸಿ ಸಿಂಪಲ್ ಆಗಿ ಹುಟ್ಟುಹಬ್ಬ ಸೆಲೆಬ್ರೇಟ್ ಮಾಡಿದ್ದಾರೆ. ಅಲ್ಲು ಅರವಿಂದ್ ತಂದೆಗೆ ಸೆಲೆಬ್ರಿಟಿಗಳು, ಅಭಿಮಾನಿಗಳು ಸೇರಿದಂತೆ ಹಲವರು ಶುಭ ಹಾರೈಸಿದ್ದಾರೆ.