ಬೆಂಗಳೂರು: ಬೆಂಗಳೂರಿನಲ್ಲಿ ಆಂಬುಲೆನ್ಸ್ ಡ್ರೈವರ್ʼನ ಅವಾಂತರದ ಚಾಲನೆಯಿಂದ ಅಪಘಾತ ಸಂಭವಿಸಿದೆ. ಹೌದು ಆ್ಯಂಬುಲೆನ್ಸ್ ಡ್ರೈವರ್ ಮಾಡಿದ ಯಡವಟ್ಟಿನಿಂದಾಗಿ ನಗರದಲ್ಲಿ ನಿನ್ನೆ ಸರಣಿ ಅಪಘಾತ ಸಂಭವಿಸಿದೆ. ಆ್ಯಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಮೂರು ಕಾರು ಮತ್ತು ಬೈಕ್ ನಡುವೆ ಸರಣಿ ಅಪಘಾತ ನಡೆದಿದೆ.
ಬೈಕ್ ಸವಾರನ ಕಾಲಿಗೆ ಹಾಗೂ ಕಾರು ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ನಿನ್ನೆ ರಾತ್ರಿ 10.45ರ ಸುಮಾರಿಗೆ ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ ಬಳಿ ಅಪಘಾತ ಆಗಿದೆ. ಮಾರ್ಕೆಟ್ನಿಂದ ಗುಡ್ಡದಹಳ್ಳಿ ಮಾರ್ಗವಾಗಿ ಆಂಬ್ಯುಲೆನ್ಸ್ ಚಾಲಕ ಸುಮಂತ್ ಬರುತ್ತಿದ್ದ. ಈ ವೇಳೆ ನಿಯಂತ್ರಣ ಸಿಗದೇ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.
Post Office Jobs: ಅಂಚೆ ಇಲಾಖೆಯಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ.! 10th ಪಾಸಾಗಿದ್ರೆ ಸಾಕು – ಇಂದೇ ಅರ್ಜಿ ಸಲ್ಲಿಸಿ
ಕಾರು ಡಿಕ್ಕಿಯಾದ ಪರಿಣಾಮ ಮುಂದಿದ್ದ ಎರಡು ಕಾರು ಹಾಗೂ ಬೈಕ್ ನಡುವೆ ಸರಣಿ ಅಪಘಾತ ಆಗಿದೆ. ಈ ವೇಳೆ ಟೆಂಕ್ಷನ್ಲ್ಲಿ ಬ್ರೇಕ್ ತುಳಿಯದೇ ಎಕ್ಸಲೇಟರ್ ತುಳಿದಿದ್ದಾನೆ ಎನ್ನಲಾಗಿದೆ. ಕಾರಿನಲ್ಲಿದ್ದ ನಾಲ್ಕು ತಿಂಗಳ ಗರ್ಭಿಣಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಆಗಿಲ್ಲ.ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬ್ಯಾಟರಾಯನಪುರ ಸಂಚಾರಿ ಪೊಲೀಸರು ಆ್ಯಂಬುಲೆನ್ಸ್ ಚಾಲಕನನ್ನು ಬಂಧಿಸಿ ಕೇಸ್ ದಾಖಲಿಸಿಕೊಂಡಿದ್ದಾರೆ.