ಬೆಂಗಳೂರು:- ನಗರದ ಹಲವೆಡೆ ತುಂತುರು ಮಳೆಯಾಗಿದೆ. ಕಾರ್ಪೋರೇಷನ್, ರಿಚ್ಮಂಡ್ ಟೌನ್, ವಿಧಾನಸೌಧ, ಟೌನ್ ಹಾಲ್ ಸೇರಿ ಹಲವೆಡೆ ತುಂತುರು ಮಳೆ ಬಂದಿದೆ. ಬೆಳಗ್ಗೆ ಕಚೇರಿಗೆ ತೆರಳುವವರು ಪರದಾಡುವಂತಾಯಿತು.
ಕರ್ನಾಟಕ ಸೇರಿದಂತೆ ಯಾವುದೇ ರಾಜ್ಯದ ವಿಚಾರದಲ್ಲೂ ತಾರತಮ್ಯ ಧೋರಣೆ ಮಾಡಿಲ್ಲ: ನಿರ್ಮಲಾ ಸೀತಾರಾಮನ್
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎಚ್ಎಎಲ್ನಲ್ಲಿ 24.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 25.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 25.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ರಾಮನಗರ, ವಿಜಯನಗರದಲ್ಲಿ ಕೂಡ ಸಾಧಾರಣ ಮಳೆಯಾಗಲಿದೆ.