ಬೆಳಗಾವಿ:- ಸ್ವಾತಂತ್ರ್ಯ ಹೋರಾಟಗಾರರನ್ನು ಅಮಿತ್ ಶಾ ಅಪಮಾನಿಸಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.
ನಿಮಗೆ 30 ಲಕ್ಷ ಹೋಮ್ ಲೋನ್ ಬೇಕಾ!? ಹಾಗಿದ್ರೆ ನಿಮ್ಮ ಸಂಬಳ ಎಷ್ಟಿರಬೇಕು ಗೊತ್ತಾ!?
ಈ ಸಂಬಂಧ ಮಾತನಾಡಿದ ಅವರು, ಸಂಸತ್ನಲ್ಲೇ ಸಂವಿಧಾನ, ಅಂಬೇಡ್ಕರ್ರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಟೀಕಿಸಿದ್ದಾರೆ. ಕೇವಲ ಡಾ.ಬಿ.ಆರ್.ಅಂಬೇಡ್ಕರ್ರನ್ನು ಅವರು ಅಪಮಾನಿಸಿಲ್ಲ. ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರನ್ನು ಅಪಮಾನಿಸಿದ್ದಾರೆ ಎಂದರು.
ಸ್ವಾತಂತ್ರ್ಯ ಸಿಕ್ಕ ಬಳಿಕ ಹಲವು ಸರ್ಕಾರಗಳು ಅಧಿಕಾರಕ್ಕೆ ಬಂದಿವೆ. ಆದರೆ ಸಂಸತ್ನಲ್ಲೇ ಡಾ.ಬಿ.ಆರ್.ಅಂಬೇಡ್ಕರ್ರನ್ನು ಟೀಕಿಸಿರಲಿಲ್ಲ. ದೇಶದ ಸ್ವಾತಂತ್ರ್ಯ ಹೋರಾಟದ ವೇಳೆಯೂ ಇದೇ ಮನಸ್ಥಿತಿ ಹೊಂದಿದ್ದರು ಎಂದು ಕಿಡಿಕಾರಿದ್ದಾರೆ.
2024ರ ಲೋಕಸಭಾ ಚುನಾವಣಾ ಪ್ರಚಾರದ ವೇಳೆಯೂ ಸಂವಿಧಾನ ಬದಲಿಸುವುದಾಗಿ ಬಿಜೆಪಿ ನಾಯಕರು ಹೇಳಿದ್ದರು. ಹೀಗೆ ಹೇಳಿದ್ದಕ್ಕೆ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿದ್ದಾರೆ. ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಸಂವಿಧಾನದ ವಿರೋಧಿಗಳು. ಮೋದಿ ಸರ್ಕಾರದಲ್ಲಿ ಸಾಂವಿಧಾನಿಕ ಸಂಸ್ಥೆಗಳ ಮೇಲೆ ದಾಳಿ ನಡೆದಿದೆ ಎಂದರು.