ಹುಬ್ಬಳ್ಳಿ:- ಗೃಹ ಸಚಿವ ಅಮಿತ್ ಶಾ ಅವರು ನಾಳೆ ಮಧ್ಯಾಹ್ನ 3.20ಕ್ಕೆ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ.
ಇನ್ನು ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪರ ಮತಯಾಚನೆ ಮಾಡಲಿರುವ ಅಮಿತ್ ಶಾ, ರಾಣೆಬೆನ್ನೂರಿನ ಕುರಬಗಿರಿ ಕ್ರಾಸ್ನಿಂದ ಅಶೋಕ ಸರ್ಕಲ್ವರೆಗೆ ಬೃಹತ್ ರೋಡ್ಶೋ ನಡೆಸಲಿದ್ದಾರೆ. ರೋಡ್ ಶೋ ಬಳಿಕ ಹುಬ್ಬಳ್ಳಿಗೆ ತೆರಳಲಿರುವ ಶಾ, ಸಂಜೆ 5.45ಕ್ಕೆ ಹುಬ್ಬಳ್ಳಿ ನೆಹರೂ ಮೈದಾನದಲ್ಲಿ ಸಾರ್ವಜನಿಕ ಸಭೆ ನಡೆಸಿ ಪ್ರಹ್ಲಾದ್ ಜೋಶಿ ಪರ ಮತಬೇಟೆ ನಡೆಸಲಿದ್ದಾರೆ. ನಂತರ ನೇಹಾ ಹಿರೇಮಠ ನಿವಾಸಕ್ಕೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳುವ ಸಾಧ್ಯತೆಯಿದೆ. ತದನಂತರ ರಾತ್ರಿ 7.10ಕ್ಕೆ ಹುಬ್ಬಳ್ಳಿ ಏರ್ಪೋರ್ಟ್ನಿಂದ ಹೈದರಾಬಾದ್ಗೆ ತೆರಳಲಿದ್ದಾರೆ
ಇನ್ನು ಮೇ 1 ರಂದು ನಮ್ಮ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರು ನಿರಂಜನ ಅವರ ಮನೆಗೆ ಭೇಟಿ ನೀಡಲಿದ್ದಾರೆ ಎಂದು ಏ.28 ರಂದು ಸುದ್ದಿಗೋಷ್ಟಿ ನಡೆಸಿ ಮಾಜಿ ಸಚಿವ ಮುರಗೇಶ್ ನಿರಾಣಿ ಹೇಳಿದ್ದರು. ನಗರದ ನೇಹಾ ಹಿರೇಮಠ ಅವರ ಮನೆಗೆ ಭೇಟಿ ನೀಡುವ ಮೂಲಕ ನಿರಂಜನ ಹಾಗೂ ತಾಯಿ ಗೀತಾ ಹಿರೇಮಠ ಅವರಿಗೆ ಸಾಂತ್ವನ ಹೇಳಿದ ನಿರಾಣಿ, ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ‘ನೇಹಾ ಹತ್ಯೆಯನ್ನು ನಾನು ಖಂಡಿಸಿಸುತ್ತೇನೆ. ಅಮಿತ್ ಶಾ ಅವರು ಬಂದಾಗ ಈ ಬಗ್ಗೆ ಚರ್ಚೆ ಮಾಡಿ ಮುಂದಿನ ತನಿಖೆ ಬಗ್ಗೆ ಹೇಗೆ ಎನ್ನುವುದನ್ನು ತಿಳಿಸುತ್ತೇವೆ ಎಂದು ಹೇಳಿದ್ದರು.