ಪಂಜಾಬ್ ರಾಜಕೀಯದಲ್ಲಿ ಪ್ರಮುಖ ಬದಲಾವಣೆಗಳು ನಡೆಯುತ್ತಿವೆ. ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಂಜಾಬ್ ರಾಜಕೀಯ ಈಗಲೇ ಬಿಸಿಯೇರುತ್ತಿದೆ. ಈ ಹಿನ್ನೆಲೆಯಲ್ಲಿ ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಮತ್ತು ಸುಖದೇವ್ ಸಿಂಗ್ ಧಿಡ್ಸಾ ಅವರ ನಡುವೆ ದೆಹಲಿಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ಅವರ ನಿವಾಸದಲ್ಲಿ ಇತ್ತೀಚೆಗೆ ನಡೆದ ಸಭೆ ವಿಶೇಷವಾಗಿತ್ತು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಂಜಾಬ್ ಲೋಕ ಕಾಂಗ್ರೆಸ್, ಬಿಜೆಪಿ ಮತ್ತು ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಜಂಟಿಯಾಗಿ ಸ್ಪರ್ಧಿಸಲಿವೆ ಎಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಸೋಮವಾರ ಘೋಷಿಸಿದ್ದಾರೆ.

