ಅನಾರೋಗ್ಯದಿಂದ ಮುಂಬೈನ ಕೋಕಿಲಾಬೆನ್ ಧೀರೂಭಾಯ್ ಆಸ್ಪತ್ರೆಗೆ ದಾಖಲಾಗಿದ್ದ ಅಮಿತಾಭ್ ಬಚ್ಚನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಅವರು ಏಕಾಏಕಿ ಆಸ್ಪತ್ರೆಗೆ ದಾಖಲಾದಾಗ ಅಭಿಮಾನಿಗಳಿಗೆ ಆತಂಕ ಆಗೋದು ಸಹಜ. ಆದರೆ, ಫ್ಯಾನ್ಸ್ ಆತಂಕ ಪಡುವ ಅಗತ್ಯವಿಲ್ಲ. ಏಕೆಂದರೆ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.
ಅಮಿತಾಭ್ ಬಚ್ಚನ್ಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿದೆ. ಈ ವಿಚಾರ ತಿಳಿದಾಕ್ಷಣ ಅಮಿತಾಭ್ ಬಚ್ಚನ್ ಅವರಿಗೆ ಹೃದಯ ಸಂಬಂಧಿ ಕಾಯಿಲೆ ಉಂಟಾಗಿರಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಅವರಿಗೆ ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಉಂಟಾಗಿಲ್ಲ. ನಟನ ಕಾಲಿನ ರಕ್ತನಾಳದ ಸಮಸ್ಯೆ ಉಂಟಾಗಿತ್ತು. ಇದಕ್ಕಾಗಿ ಅವರಿಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿದೆ. ಅಮಿತಾಭ್ ಶುಕ್ರವಾರ ಸಂಜೆಯೇ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ. ಅವರ ಹೆಲ್ತ್ ಅಪ್ಡೇಟ್ ಕೇಳಿ ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ. ಅವರು ಬೇಗ ಸಂಪೂರ್ಣ ಚೇತರಿಕೆ ಕಾಣಲಿ ಎಂದು ಫ್ಯಾನ್ಸ್ ಹೇಳಿದ್ದಾರೆ.