ಬೆಂಗಳೂರು:- ದರ್ಶನ್ ಕೇಸ್ ಮುಚ್ಚಿಹಾಕುವ ಪ್ರಯತ್ನ ನಡೆದಿತ್ತಾ? ಎಂಬ ವಿಚಾರವಾಗಿ ಡಿಸಿಎಂ ಡಿಕೆಶಿ ಪ್ರತಿಕ್ರಿಯೆ ನೀಡಿದ್ದಾರೆ.
ಕೊಲೆ ಕೇಸ್ ನಲ್ಲಿ ದರ್ಶನ್ ಅರೆಸ್ಟ್.. ಅಪ್ಪನ ಬಗ್ಗೆ ಮಗ ಭಾವುಕ ಪೋಸ್ಟ್..
ಆರೋಪಿ ನಟ ದರ್ಶನ್ ಇರಿಸಿರುವ ಠಾಣೆಗೆ ಶಾಮಿಯಾನ ಹಾಕಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್ ತಮ್ಮನ್ನು ಜೈಲಿನ ಅನುಭವವನ್ನು ಹೇಳಿಕೊಂಡಿದ್ದಾರೆ. ನನ್ನನ್ನೂ ಸ್ಟೇಷನ್ಗೆ, ಕೊರ್ಟ್ಗೆ ಕರೆದುಕೊಂಡು ಹೋಗಬೇಕಾದ್ರೆ ಪೊಲೀಸರು ಮರೆಮಾಚಿ ಕರೆದುಕೊಂಡು ಹೋಗ್ತಿದ್ರು ಅಂತ ಹಳೆಯ ನೆನಪೊಂದನ್ನು ಮೆಲುಕು ಹಾಕಿದ್ದಾರೆ.
ಸಭೆಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಶಾಸಕ ಟಿ.ಬಿ ಜಯಚಂದ್ರ ಸೇರಿದಂತೆ ಮೊದಲಾದವರು ಭಾಗಿಯಾಗಿದ್ದರು. ಭದ್ರಾ ಮೇಲ್ದಂಡೆ ಯೋಜನೆಗಳ ಅರಣ್ಯ ತೀರುವಳಿ ಮತ್ತು ಭೂಸ್ವಾಧೀನ ಪ್ರಸ್ತಾವನೆ ಕುರಿತು ಚರ್ಚೆ ನಡೆಸಲಾಯಿತು
ದರ್ಶನ್ ಕೇಸ್ ಮುಚ್ಚಿಹಾಕುವ ವಿಚಾರದಲ್ಲಿ ತಮ್ಮನ್ನು ಸಂಪರ್ಕ ಮಾಡಿದ್ರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನನ್ನ ಬಳಿ ಮಾತು-ಕತೆ ಆಡಿಲ್ಲ. ನನ್ನ ಜೊತೆಗೆ ಸಂಪರ್ಕವೂ ಇರಲಿಲ್ಲ. ಕೇಸ್ ಆಗಿ 24 ಗಂಟೆ ಆದ್ಮೇಲೆ ನನಗೆ ಗೊತ್ತಾಯ್ತು ಎಂದು ಹೇಳಿದ್ದಾರೆ.
ಇದೇ ವೇಳೆ ಠಾಣೆಗೆ ಶಾಮಿಯಾನ ಹಾಕಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಅದೆಲ್ಲ ನನಗೆ ಗೊತ್ತಿಲ್ಲ. ನನ್ನ ಕೇಸ್ನಲ್ಲಿ ಆದ ಅನುಭವ ಹೇಳ್ತೀನಿ ಕೇಳಿ. ನನ್ನನ್ನ ಸ್ಟೇಷನ್ಗೆ, ಕೊರ್ಟ್ಗೆ ಕರೆದುಕೊಂಡು ಹೋಗಬೇಕಾದ್ರೆ ಪೊಲೀಸರು ಮರೆಮಾಚಿ ಕರೆದುಕೊಂಡು ಹೋಗ್ತಿದ್ರು. ಕೆಲ ಸಮಯ ದಾರಿ ಬದಲಾಯಿಸುತ್ತಿದ್ದರು. ಹಾಗೆಯೇ ದರ್ಶನ್ ಅಭಿಮಾನಿಗಳು ಹಾಕೋದು, ಬಾವುಟ ಹಾರಿಸೋದು ಮಾಡ್ತಾರೆ, ಕೆಲವೊಮ್ಮೆ ಓಡೋಡಿ ಬರುತ್ತಿದ್ದರು. ಹೆಚ್ಚು ಅಭಿಮಾನಿಗಳು ಸೇರುತ್ತಾರೆ ಎಂಬ ಕಾರಣಕ್ಕೆ ಹಾಗೆ ಮಾಡಿರಬಹುದು ಎಂದು ತಿಳಿಸಿದ್ದಾರೆ.