ಬೆಂಗಳೂರು: ಚಿನ್ನ ಕಳ್ಳಸಾಗಣೆ ಸ್ಯಾಂಡಲ್ವುಡ್ ನಟಿ ರನ್ಯಾ ರಾವ್ ಬಂಧನವಾಗಿದ್ದು, ಡಿಆರ್ಐ ಹಾಗೂ ಸಿಬಿಐ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿವೆ. ಇನ್ನೂ ಈ ವಿಚಾರವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ. ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಪ್ರಭಾವಿ ಸಚಿವರೊಬ್ಬರ ಕೈವಾಡವಿದೆ ಎಂಬ ಆರೋಪದ ಕುರಿತು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಪ್ರಕರಣ ಸೂಕ್ತ ತನಿಖೆಯಾಗಲಿ, ಆಗ ಗೊತ್ತಾಗಲಿದೆ ಎಂದರು.
Black water: ಬ್ಲ್ಯಾಕ್ ವಾಟರ್ ಎಂದರೇನು..? ಸೆಲೆಬ್ರಿಟಿಗಳು ಯಾಕೆ ಇದನ್ನು ಜಾಸ್ತಿ ಕುಡಿಯುತ್ತಾರೆ ಗೊತ್ತಾ.?
ಗ್ಯಾರಂಟಿ ಸಮಿತಿಗಳ ವಿರುದ್ಧದ ಬಿಜೆಪಿ ಪ್ರತಿಭಟನೆ ಕುರಿತು ಮಾತನಾಡಿದ ಅವರು, 2023ರಲ್ಲಿ ಸರ್ಕಾರ ರಚನೆಯಾದ ಬಳಿಕ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಬಳಿಕ ಸೂಕ್ತ ರೀತಿಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ದೃಷ್ಟಿಯಿಂದ ಗ್ಯಾರಂಟಿ ಸಮಿತಿಗಳನ್ನು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ರಚಿಸಲಾಯಿತು. ಈಗ ಸಮಿತಿಗಳನ್ನು ರದ್ದುಗೊಳಿಸುವಂತೆ ಪ್ರತಿಪಕ್ಷಗಳು ನಡೆಸುತ್ತಿರುವ ಹೋರಾಟಕ್ಕೆ ಅರ್ಥವಿಲ್ಲ ಎಂದು ಹೇಳಿದರು.
ನಮ್ಮ ಯೋಜನೆಗಳನ್ನೇ ಬಿಜೆಪಿ ಇತರ ರಾಜ್ಯಗಳಲ್ಲಿ ಜಾರಿಗೆ ತಂದಿದೆ. ಮಹಾರಾಷ್ಟ್ರ ಸರ್ಕಾರ ನಮ್ಮದೇ ಗೃಹಲಕ್ಷ್ಮಿ ಯೋಜನೆಯನ್ನು ಲಾಡ್ಲಿ ಬೆಹೆನಾ ಹೆಸರಿನಲ್ಲಿ ಚುನಾವಣೆಗೂ ಮುನ್ನ ಎರಡು ತಿಂಗಳು ಹಣ ನೀಡಿತ್ತು. ಆದರೆ ಚುನಾವಣೆಯಲ್ಲಿ ಗೆದ್ದ ಬಳಿಕ ಈ ಯೋಜನೆಯನ್ನೇ ಬಂದ್ ಮಾಡಲಾಗಿದೆ. ಇದು ಬಿಜೆಪಿ ಸರ್ಕಾರಗಳ ಸ್ಥಿತಿ ಎಂದು ವ್ಯಂಗ್ಯವಾಡಿದರು.