ಹಾಸನ : ಹಾಸನ ಜಿಲ್ಲೆಯಲ್ಲೊಂದು ಅಮಾನವೀಯ ಕೃತ್ಯ ನಡೆದಿದೆ. ಬುದ್ಧಿಮಾಂಧ್ಯ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬೇಲೂರು ತಾಲೂಕಿನಲ್ಲಿ ಘಟನೆ ನಡೆದಿದೆ. ಬಾಲಕಿಯ ಪಕ್ಕದ ಮನೆಯ ನಿವಾಸಿಯಿಂದಲೇ ಹೀನಕೃತ್ಯ ನಡೆದಿದೆ.
ಬುದ್ಧಿಮಾಂದ್ಯ ಬಾಲಕಿಯ ಪೋಷಕರು ಸಂಬಂಧಿಕರೊಬ್ಬರ ಬೀಗರ ಊಟಕ್ಕೆ ಹೋಗಿದ್ದರು. ಈ ವೇಳೆ ಮನೆಯಲ್ಲಿ ಒಬ್ಬಳೇ ಇದ್ದ ಬುದ್ಧಿಮಾಂದ್ಯ ಬಾಲಕಿಯನ್ನು ಚಾಕಲೆಟ್ ಕೊಡುವ ನೆಪದಲ್ಲಿ ಪುಸಲಾಯಿಸಿ, ಅತ್ಯಾಚಾರ ಎಸಗಿದ್ದಾನೆ. ಸಂಜೆ ವೇಳೆಗೆ ಪೋಷಕರು ಬಂದಾಗ ಬಾಲಕಿಯ ವರ್ತನೆ ಬದಲಾಗಿದ್ದು ಕಂಡು, ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದಾಗ ಅತ್ಯಾಚಾರ ನಡೆದಿರುವುದು ಗೊತ್ತಾಗಿದೆ. ವಿಷಯ ಪೋಷಕರಿಗೆ ತಿಳಿಯುತ್ತಿದ್ದಂತೆ ಆರೋಪಿ ಮನೆಯ ಹಿಂಬಾಗಿಲಿನಿಂದ ಎಸ್ಕೇಪ್ ಆಗಿದ್ದಾನೆ. ಹಳೇಬೀಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.