ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಸಾವು..!

ಬೀದರ್:- ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಕೋಡಂಬಲ್ ಗ್ರಾಮದಲ್ಲಿ ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಸಾವನ್ನಪ್ಪಿದ ಘಟನೆ ಜರುಗಿದೆ. ಟೈಯರ್ ಫ್ಯಾಕ್ಟರಿ ಸ್ಥಳಾಂತರಕ್ಕೆ ಆಗ್ರಹಿಸಿ ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರ..! 31 ವರ್ಷದ ಆನಂದ್ ಮೃತ ದುರ್ದೈವಿ ಎನ್ನಲಾಗಿದೆ. ಕೋಡಂಬಲ್ ಚೆಕ್​ಪೋಸ್ಟ್​ನಲ್ಲಿ ಕರ್ತವ್ಯ ನಿರ್ವಹಿಸುವಾಗ ಹೃದಯಾಘಾತ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ನಾಳೆ ಎರಡನೇ ಹಂತದ ಮತದಾನ ನಡೆಯಲಿದೆ. 14 ಕ್ಷೇತ್ರಗಳಲ್ಲಿ ವೋಟಿಂಗ್ ನಡೆಯಲಿದೆ ಎಂದು ತಿಳಿದು ಬಂದಿದೆ