ಮಂಡ್ಯ :- ರೈಲಿಗೆ ಸಿಲುಕಿ ಅಪರಿಚಿತ ಮಹಿಳೆ ಸಾವನ್ನಪ್ಪಿದ ಘಟನೆ ಹನಕೆರೆ ಗ್ರಾಮದ ರೈಲ್ವೆ ಗೇಟ್ ಬಳಿ ಜರುಗಿದೆ.
England vs West Indies Test Match: ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಬೆನ್ ಸ್ಟೋಕ್ಸ್
ಹನಕೆರೆ ಗ್ರಾಮದಿಂದ ಮಂಡ್ಯ ಕಡೆ ತೆರಳುವ ಮಾರ್ಗದಲ್ಲಿ ರೈಲಿಗೆ ಸಿಲುಕಿ ಮಹಿಳೆ ಸಾವನ್ನಪ್ಪಿದ್ದಾರೆ. ರೈಲ್ವೆ ಗೇಟ್ ಬಳಿ ರಸ್ತೆ ದಾಟುವ ವೇಳೆ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಮಂಡ್ಯ ರೈಲ್ವೇ ಹೊರಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮೃತರ ವಾರಸುದಾರರು ಸಂಪರ್ಕಿಸಲು ಪೊಲೀಸರು ಮನವಿ ಮಾಡಿದ್ದಾರೆ.
ಸುಮಾರು (45)ವರ್ಷದ ಅಪರಿಚಿತ ಮಹಿಳೆ ಆಗಿದ್ದು, ಮೈಸೂರು ರೈಲ್ವೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.