ಚಿಕ್ಕಮಗಳೂರು:-CM ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆಗೆ ಮಾಜಿ ಶಾಸಕ ಸಿಟಿ ರವಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು ಹಿರಿಯರು ಮತ್ತು ಸ್ಥಾನಕ್ಕೆ ಕೊಡಬೇಕಾದ ಗೌರವ ಕೊಡಲೇಬೇಕು. ಹೆಗಡೆಯವರ ಕಾರ್ಯಶೈಲಿ ಭಿನ್ನವಿದೆ. ಹಾಗಂತ ಮತ್ತೊಬ್ಬರನ್ನ ನೋಯಿಸಬಾರದು. ಅವರ ಹೇಳಿಕೆಯನ್ನ ನಾವು ಸಮರ್ಥಿಸಿಕೊಳ್ಳುವುದಿಲ್ಲ. ರಾಮ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವನು. ಅವರು ಏಕವಚನದಲ್ಲಿ ಮಾತನಾಡಿರುವುದ ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.
ಇನ್ನೂ ಘಜನಿ, ಘೋರಿ, ಬಾಬರ್ ಮಾನಸಿಕತೆ ಬಹಳ ಅಪಾಯಕಾರಿ. ಇಲ್ಲಿನ ಮುಸ್ಲಿಮರು ಅದರಿಂದ ಹೊರ ಬರಬೇಕು ಎಂದು ಬಿಜೆಪಿ ನಾಯಕ ಸಿಟಿ ರವಿ ಹೇಳಿದ್ದಾರೆ.
ಘಜನಿ, ಕಿಲ್ಜಿ, ಘೋರಿ, ಔರಂಗಜೇಬ್, ಮೊಘಲರು, ಟಿಪ್ಪು ಕಾಲದಲ್ಲಿ 42 ಸಾವಿರ ದೇಗುಲ ಧ್ವಂಸ ಮಾಡಲಾಗಿತ್ತು. ಭಾರತೀಯ ಮುಸಲ್ಮಾನರು ಆ ದಾಳಿಕೋರರ ಜೊತೆ ತಮ್ಮ ಅಸ್ಮಿತೆಯನ್ನ ಗುರುತಿಸಿಕೊಳ್ಳುವುದಿಲ್ಲ. ಎಲ್ಲಾ ಮುಸ್ಲಿಮರನ್ನು ಒಂದೇ ತಕ್ಕಡಿಯಲ್ಲಿಟ್ಟು ನಾವು ನೋಡುವುದಿಲ್ಲ. ಇಲ್ಲಿನ ಮುಸ್ಲಿಮರಿಗೆ ಶಿಶುನಾಳ ಷರೀಫ್, ಅಬ್ದುಲ್ ಕಲಾಂ ಆದರ್ಶವಾಗಬೇಕು. ಆಗ ನಮ್ಮಲ್ಲಿ ಸಹೋದರತ್ವ ಭಾವನೆ ಗಟ್ಟಿಯಾಗುತ್ತದೆ ಎಂದು ಹೇಳಿದ್ದಾರೆ.