ಆನೇಕಲ್: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡ ಪರಿಣಾಮ ಟೈಲ್ಸ್ ಗೋದಾಮು ಸುಟ್ಟು ಕರಕಲಾಗಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಹಾರಗದ್ದೆ ಗ್ರಾಮದಲ್ಲಿ ನಡೆದಿದೆ. ಇನ್ನು ಈ ಘಟನೆಗೆ ಪ್ರಮುಖ ಕಾರಣ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿರುವುದಾಗಿ ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ . ಬೆಂಕಿಯ ಕೆನ್ನಾಲಿಗೆಗೆ ಗೋದಾಮಿನಲ್ಲಿದ್ದ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿದೆ .ಅಲ್ಲದೆ ಬೆಂಕಿಯಿಂದಾಗಿ ಕಿಲೋಮೀಟರ್ ಗಟ್ಟಲೆ ದಟ್ಟವಾದ ಹೊಗೆ ಕಾಣಿಸಿಕೊಂಡು ಇಲ್ಲಿನ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ , ಮಾಹಿತಿ ತಿಳಿದ ಅಗ್ನಿಶಾಮಕ ದಳದ ಸಿಬಂಧಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ

