ಬೆಂಗಳೂರು:- ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ ಮೂರು ದಿನಗಳಿಂದ ನಗರದ ಫ್ರೀಡಂ ಪಾರ್ಕಿನಲ್ಲಿ ಅಂಗನವಾಡಿ ಕಾರ್ಯಕರ್ತರು ಚಳಿ, ಗಾಳಿ ಎನ್ನದೇ ಬೆಂಗಳೂರು ಚಲೋ ಚಳವಳಿ ನಡೆಸಿದರು.
ಈ ಹಿನ್ನೆಲೆ ಇಂದು ಪರಿಷತ್ ಶಾಸಕ ಟಿಎ ಶರವಣ ಅವರು, ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಮೂರು ದಿನಗಳಿಂದ ಫ್ರೀಡಂ ಪಾರ್ಕಿನಲ್ಲಿ ನಡೆಸುತ್ತಿರುವ ಬೆಂಗಳೂರು ಚಲೋ ಚಳುವಳಿಯಲ್ಲಿ ಪಾಲ್ಗೊಂಡು ಅವರ ಪರವಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಈ ವೇಳೆ ಶೀಘ್ರವೇ ಕಾರ್ಯಕರ್ತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಕರ್ನಾಟಕ ವಿಧಾನ ಪರಿಷತ್ ಶಾಸಕರು ಹಾಗೂ ಸರ್ಕಾರಿ ಭರವಸೆಗಳ ಸಮಿತಿ ಅಧ್ಯಕ್ಷರು ಆಗಿರುವ ಟಿ.ಎ. ಶರವಣ ಅವರು ಸರ್ಕಾರಕ್ಕೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಾಕಷ್ಟು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಸೇರಿ ಮತ್ತಿತರರು ಉಪಸ್ಥಿತರಿದ್ದರು.