ದೊಡ್ಡಬಳ್ಳಾಪುರ: ಅಂಗನವಾಡಿ ಕಟ್ಟಡ ಶೀಥಲಾವಸ್ಥೆ ಹಂತಕ್ಕೆ ತಲುಪಿದ್ದು, ನೆಲಸಮ ಮಾಡಿ ಹೊಸ ಕಟ್ಟಡ ನಿರ್ಮಾಣಕ್ಕೆ ಹಣ ಹಣ ಮಂಜೂರಾಗಿದ್ದರು ಸಹ ಅಧಿಕಾರಿಗಳು ಮೀನಾಮೇಷ ಎಣಿಸುತ್ತಿದ್ದಾರೆ. ತಾಲೂಕಿನ ತಿರುಮಗೊಂಡನಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ಶಿಥಿಲಾವಸ್ಥೆ ಹಂತಕ್ಕೆ ತಲುಪಿದ್ದು, ಕಳೆದ 4 ನಾಲ್ಕು ವರ್ಷಗಳಿಂದ ಬಾಡಿಗೆ ಕಟ್ಟಡದಲ್ಲಿ ಮಕ್ಕಳಿಗೆ ಪಾಠ ಮಾಡಲಾಗುತ್ತಿದೆ.15 ರಿಂದ 20 ಮಕ್ಕಳು ಅಂಗನವಾಡಿ ಕೇಂದ್ರದಲ್ಲಿದ್ದು ಬಾಡಿಗೆ ಕಟ್ಟಡದಲ್ಲಿ ಮಕ್ಕಳಿಗೆ ಬೇಕಾದ ಸೌಲಭ್ಯಗಳ ವ್ಯವಸ್ಥೆ ಇಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣ ವಾಗಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಿಂದ 2022 ರಲ್ಲಿ ಖನಿಜ ಪ್ರತಿಷ್ಠಾನ ನಿಧಿ ಯೋಜನೆಯಡಿ 10 ಲಕ್ಷ ಮತ್ತು ನರೇಗಾ ಯೋಜನೆಯಡಿ 05 ಲಕ್ಷ ಹಣ ತಿರುಮಗೊಂಡನಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕೇಂದ್ರ ನಿರ್ಮಾಣಕ್ಕೆ ಮಂಜೂರಾಗಿದೆ. ಆದರೆ ಮಂಜುರಾತಿಯಾಗಿ ವರ್ಷಗಳೆ ಕಳೆದರು ಸಂಭಂದಿಸಿದ ಅಧಿಕಾರಿಗಳು ಗಮನ ಅರಿಸದೆ ನಿರ್ಲಕ್ಷ್ಯ ತೋರಿದ್ದಾರೆ.
‘ಕಟ್ಟಡ ನೆಲಸಮ ಮಾಡುವಂತೆ ಗ್ರಾಮ ಪಂಚಾಯ್ತಿಗೆ ಆದೇಶ’
ಶೀಥಿಲಾವಸ್ಥೆ ಹಂತಕ್ಕೆ ತಲುಪಿರುವ ಅಂಗನವಾಡಿ ಕಟ್ಟಡವನ್ನು ನೆಲಸಮ ಮಾಡುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಹಾಡೋನಹಳ್ಳಿ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗೆ ಅಕ್ಟೋಬರ್ 2022 ರಲ್ಲಿ ಆದೇಶ ನೀಡಿರುತ್ತಾರೆ. ಇದನ್ನು ಪರಿಗಣಿಸದೆ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿರುವುದು ಎದ್ದು ಕಾಣುತ್ತಿದೆ.
ಒಟ್ಟಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅವ್ಯವಸ್ಥೆಗಳ ಗೂಡಾಗಿರುವ ಬಾಡಿಗೆ ಕಟ್ಟಡದಲ್ಲಿ ಅಂಗನವಾಡಿ ಮಕ್ಕಳು ಪಾಠ ಕೇಳುವ ಪರಿಸ್ಥಿತಿ ಬಂದಿದೆ.ಇನ್ನಾದರು ಹೆಚ್ಚೆತ್ತು ಕೊಂಡು ಅಂಗನವಾಡಿ ಕಟ್ಟಡ ನಿರ್ಮಾಣ ಮಾಡಿ ಮಕ್ಕಳಿಗೆ ಅನುಕೂಲ ಮಾಡಿಕೊಡುವುದು ಸೂಕ್ತವಾಗಿದೆ.