ಬೆಂಗಳೂರು;- ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆಗೆ ಕರೆ ನೀಡಿದ್ದ ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಪ್ರತಿಭಟನೆ ಹಿಂಪಡೆದಿದ್ದಾರೆ.
ಸಹಾಯಕಿಯರ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿನ ಮೂಲಭೂತ ಸಮಸ್ಯೆಗಳ ಪರಿಹಾರದ ಕುರಿತು ಬೇಡಿಕೆ ಈಡೇರಿಕೆಗೆ ಕಾರ್ಯಕರ್ತರು ಪಟ್ಟು ಹಿಡಿದಿದ್ದರು. ಸರ್ಕಾರ ಬೇಡಿಕೆ ಈಡೇರಿಸದ ಕಾರಣ ಪ್ರತಿಭಟನೆ ಕರೆ ಕೊಟ್ಟಿದ್ರು.
ಈ ಸಂಬಂಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರು, ಅಂಗನವಾಡಿ ಫೆಡರೇಷನ್ನಿನ ಪದಾಧಿಕಾರಿಗಳಿಂದ ಸಭೆ ನಡೆದಿದ್ದು, ಸಭೆಯಲ್ಲಿ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದಾರೆ. ಹೀಗಾಗಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ವಾಪಸ್ಸು ಪಡೆದಿದ್ದಾರೆ.