ಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ ಮುಡಾ ಸಂಕಷ್ಟ ನಿಲ್ಲುವಂತೆ ಕಾಣ್ತಿಲ್ಲ. ಮುಡಾ ಹಣವನ್ನು ವರುಣ ಕ್ಷೇತ್ರದ (Varuna Constituency) ಹಳ್ಳಿಗಳ ಅಭಿವೃದ್ಧಿಗೆ ಬಳಸಲಾಗಿದೆ ಎಂದು ಆರೋಪ ಕೇಳಿ ಬಂದಿದೆ.
ತಂದೆ ಇಲ್ಲದ ಮಕ್ಕಳ ಖಾತೆಗೆ 24 ಸಾವಿರ ರೂ.: ಈ ಯೋಜನೆಯ ಫಲಾನುಭವಿಯಾಗಲು ಈ ದಾಖಲೆ ಕಡ್ಡಾಯ
ಸಿಎಂ ಮೌಖಿಕ ಆದೇಶದ ಮೇರೆಗೆ ಕಾನೂನು ಮೀರಿ ಮುಡಾ ಹಣವನ್ನು ವರುಣ ಕ್ಷೇತ್ರದ ಹಳ್ಳಿಗಳ ಅಭಿವೃದ್ಧಿಗೆ ಬಳಸಲಾಗಿದೆ ಎಂದು ಆರೋಪಿಸಿ ರಾಜ್ಯಪಾಲರಿಗೆ ಮೈಸೂರು ಮೂಲದ ಪಿ.ಎಸ್. ನಟರಾಜು ದೂರುಕೊಟ್ಟಿದ್ದಾರೆ.
ಪ್ರಾಧಿಕಾರದ ಸಭೆಯ ಕಡತದಲ್ಲೇ ಈ ವಿಚಾರ ಉಲ್ಲೇಖವಾಗಿದೆ. ಆರ್ಥಿಕವಾಗಿ ನಷ್ಟದಲ್ಲಿದ್ದರೂ ಮುಡಾದ 450 ಕೋಟಿ ರೂ. ಮೊತ್ತದ ಕಾಮಗಾರಿ ಕೈಗೊಂಡು ಅಧಿಕಾರ ದುರುಪಯೋಗಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಸಿಬಿಐ ತನಿಖೆಗೆ ಸೂಚಿಸಬೇಕೆಂದು ಎಂದು ನಟರಾಜ್ ಕೋರಿದ್ದಾರೆ.
ದೂರಿನ ಹಿನ್ನೆಲೆಯಲ್ಲಿ ಸಂಬಂಧ ಅಗತ್ಯ ದಾಖಲೆಗಳೊಂದಿಗೆ ಶೀಘ್ರ ವರದಿ ಸಲ್ಲಿಸುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸೆ.5ರಂದು ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.