ಕಲಬುರಗಿ: ಈಗೀಗ ಹೃದಯಾಘಾತ ಬಹಳ ಸಾಮಾನ್ಯ ಕಾಯಿಲೆಯಾಗಿಬಿಟ್ಟಿದೆ. 30 ವರ್ಷ ಮೇಲ್ಪಟ್ಟವರಿಗೂ ಈಗ ಹೃದಯಾಘಾತ ಕಾಣಿಸಿಕೊಳ್ಳುತ್ತಿದೆ. ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿದೆ. ಮಧ್ಯವಯಸ್ಸಿನವರಲ್ಲಿ ಮಾತ್ರವಲ್ಲದೆ ಸಣ್ಣ ಮಕ್ಕಳಲ್ಲೂ ಈಗೀಗ ಹೃದಯಾಘಾತ ಉಂಟಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕ ಮೂಡಿಸಿದೆ.
ಇದೀಗ 17 ವರ್ಷದ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದಲ್ಲಿ ನಡೆದಿದೆ. ಕೋರೇಶ್ ಸಿದ್ದಣ್ಣ ಮದ್ರಿ ಮೃತಪಟ್ಟ ಯುವಕ. ಕಲಬುರಗಿ ನಗರದಲ್ಲಿ ಪ್ಯಾರಾ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ ಕೋರೇಶ್ ಗ್ರಾಮದಲ್ಲಿ ಸ್ನೇಹಿತರ ಜೊತೆ ಕುಳಿತಾಗ ಎದೆ ನೋವು ಕಾಣಿಸಿಕೊಂಡಿದೆ.
Mouth Wash Effects: ಬ್ರಷ್ ಮಾಡಿದ ನಂತರ ಮೌತ್ ವಾಶ್ ಬಳಸುತ್ತೀರಾ..? ಹಾಗಾದ್ರೆ ಅನುಕೂಲಕ್ಕಿಂತ ಅಪಾಯವೇ ಹೆಚ್ಚು!
ತಕ್ಷಣ ಗೆಳೆಯನೊಬ್ಬ ಕೋರೇಶ್ನನ್ನು ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಿದ್ದಾನೆ. ಈ ಮಧ್ಯೆ ಬೈಕ್ ಮೇಲೆ ತೆರಳುತ್ತಿದ್ದಾಗ ಮಾರ್ಗ ಮಧ್ಯದಲ್ಲಿಯೇ ಕೊನೆಯುಸಿರೆಳೆದಿದ್ದಾನೆ. ಏಕೈಕ ಮಗನನ್ನು ಹೊಂದಿದ್ದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಹರೆಯಕ್ಕೆ ಕಾಲಿಡುತ್ತಿದ್ದ ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ ದುರ್ಘಟನೆ ಇಡೀ ಗ್ರಾಮದ ಜನರಲ್ಲಿ ಬೇಸರ ಮೂಡಿಸಿದೆ.