ಬೆಳಗಾವಿ:- ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿ ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷ್ಯ ಎಂಬ ಆರೋಪ ಕೇಳಿ ಬಂದಿದೆ.
ಗೋಕಾಕ್ ತಾಲೂಕಿನ ಲಗಮೇಶ್ವರ ಗ್ರಾಮದ ಕೀರ್ತಿ ನೇಸರಗಿ(19) ಮೃತ ಬಾಣಂತಿ. ಎರಡು ದಿನದ ಹಿಂದೆ ವೈದ್ಯರು ಮಹಿಳೆಗೆ ಸಿಜರಿನ್ ಮಾಡಿ ಹೆರಿಗೆ ಮಾಡಿದ್ದರು. ಬಳಿಕ ತೀವ್ರ ರಕ್ತಸ್ರಾವ ಆಗಿ ಬಾಣಂತಿ ಕೀರ್ತಿ ಸಾವನ್ನಪ್ಪಿದ್ದಾರೆ. ರಕ್ತಸ್ರಾವ ಆಗುವುದು ಗೊತ್ತಾದ ಮೇಲೆಯೂ ವೈದ್ಯರು ವಾರ್ಡ್ ಗೆ ಶಿಪ್ಟ್ ಮಾಡಿದ್ದರು. ಐಸಿಯುವಿನಲ್ಲಿ ಚಿಕಿತ್ಸೆ ಕೊಡಿಸದೇ ವಾರ್ಡ್ ಗೆ ಶಿಪ್ಟ್ ಮಾಡಿದ್ದರು. ಆದ್ರೆ ರಾತ್ರಿ 9ಗಂಟೆ ಸುಮಾರಿಗೆ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.