Darshan Arrest Case: ನಟ ದರ್ಶನ್ & ಗ್ಯಾಂಗ್‌ʼಗೆ ಮತ್ತೆ ನಿರಾಸೆ: ಆ.1ರ ವರೆಗೆ ಜೈಲೇ ಗತಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Darshan) ಮತ್ತು ಗ್ಯಾಂಗ್‌ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ದರ್ಶನ್ ಮತ್ತು ಗ್ಯಾಂಗ್‌ಗೆ ಈಗಾಗಲೇ ವಿಧಿಸಿದ್ದ 14 ದಿನಗಳ ನ್ಯಾಯಾಂಗ ಬಂಧನ ಇಂದಿಗೆ ಅಂತ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಪವಿತ್ರಾ ಗೌಡರನ್ನು ಮಾತ್ರ ಪ್ರತ್ಯೇಕವಾದ ಕೊಠಡಿಯಲ್ಲಿ ಹಾಜರುಪಡಿಸಲಾಗಿತ್ತು. ಆರೋಪಿಗಳಿಗೆ ಆ.1 ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ನ್ಯಾಯಾಲಯ ಆದೇಶಿಸಿದೆ. … Continue reading Darshan Arrest Case: ನಟ ದರ್ಶನ್ & ಗ್ಯಾಂಗ್‌ʼಗೆ ಮತ್ತೆ ನಿರಾಸೆ: ಆ.1ರ ವರೆಗೆ ಜೈಲೇ ಗತಿ