ಛತ್ತೀಸ್ಗಢದ ಗರಿಯಾಬಂದ್ನಲ್ಲಿ ನಡೆದ ಎನ್ಕೌಂಟರ್ನಲ್ಲಿ ಒಟ್ಟು 14 ಮಂದಿ ನಕ್ಸಲರನ್ನು ಹತ್ಯೆ ಮಾಡಲಾಗಿದೆ. ಸುಮಾರು 36 ಗಂಟೆಗಳ ಕಾಲ ಎನ್ಕೌಂಟರ್ ನಡೆದಿದೆ. ಭದ್ರತಾ ಪಡೆಗಳು ನಕ್ಸಲೀಯರ ವಿರುದ್ಧ ಇತ್ತೀಚಿನ ದಿನಗಳಲ್ಲಿ ಕೈಗೊಂಡ ಅತಿದೊಡ್ಡ ಕಾರ್ಯಾಚರಣೆ ಇದಾಗಿದೆ.
ಹೌದು ಭೀಕರ ಗುಂಡಿನ ಚಕಮಕಿಯಲ್ಲಿ 14 ನಕ್ಸಲರು ಅಸುನೀಗಿದ್ದಾರೆ. ಸಾವಿಗೀಡಾದ ಮಾವೋವಾದಿಗಳಲ್ಲಿ 1 ಕೋಟಿ ರೂ. ಬಹುಮಾನ ಹೊಂದಿದ್ದ ನಾಯಕ ಕೂಡ ಇದ್ದಾರೆ. ಛತ್ತೀಸ್ಗಢ ಗರಿಯಾಬಂದ್ ಜಿಲ್ಲೆಯಲ್ಲಿ ಈ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಮಂಗಳವಾರ ಈ ಕೆಲಸಗಳನ್ನು ಮಾಡಿದ್ರೆ ನಿಮಗೆ ಬೇಡವೆಂದರೂ ಸಂಪತ್ತು ಹುಡುಕಿ ಬರುತ್ತೆ.!
ಮಾವೋವಾದಿಗಳ ಕೇಂದ್ರೀಯ ಸಮಿತಿ ಸದಸ್ಯ ಜಯರಾಮ್ ಅಲಿಯಾಸ್ ಛಲಪತಿ ಸಾವಿಗೀಡಾದ ಮಾವೋವಾದಿ ನಾಯಕರಾಗಿದ್ದಾರೆ. ಈತನ ತಲೆಗೆ ಈ ಹಿಂದೆ ಸರ್ಕಾರ 1 ಕೋಟಿ ರೂ. ಬಹುಮಾನ ಘೋಷಿಸಿತ್ತು.
ಸೋಮವಾರ ರಾತ್ರಿ ಹಾಗೂ ಮಂಗಳವಾರ ಮುಂಜಾನೆ ಛತ್ತೀಸ್ಗಢ – ಒಡಿಶಾ ಗಡಿಯಲ್ಲಿ ಬರುವ ಮಣಿಪುರ್ ಪೊಲೀಸ್ ಠಾಣೆಯ ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಜಯರಾಮ್ ಅಲಿಯಾಸ್ ಛಲಪತಿ ಬಲಿಯಾಗಿದ್ದಾರೆ.
ಎನ್ಕೌಂಟರ್ ನಡೆದ ಜಾಗದಿಂದ ಸೆಲ್ಫ್ ಲೋಡಿಂಗ್ ರೈಫಲ್ ಸೇರಿದಂತೆ ದೊಡ್ಡ ಪ್ರಮಾಣದ ಬಂದೂಕುಗಳು, ಮದ್ದುಗುಂಡುಗಳು ಮತ್ತು ಸುಧಾರಿತ ಸ್ಫೋಟಕ (ಐಇಡಿ)ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.