ಜಾಗತಿಕ ತಾಪಮಾನ, ಹವಾಮಾನ ಬದಲಾವಣೆಯ ಕುರಿತು ದತ್ತಾಂಶ ಸಂಗ್ರಹಿಸಲು ಭಾರತವು ತನ್ನ ಮೊದಲ ಮರುಬಳಕೆ ಮಾಡಬಹುದಾದ ಹೈಬ್ರಿಡ್ ರಾಕೆಟ್ ‘RHUMI-1’ ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ.
ಚೆನ್ನೈನ ತಿರುವಿದಂಧೈನಿಂದ ರಾಕೆಟ್ ಉಡಾವಣೆ ಮಾಡಲಾಯಿತು ಈ ಉಡಾವಣೆ ಯಶಸ್ವಿಯಾಗಿದೆ. ಈ ಮೂಲಕ ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಭಾರತದ ಸಾಧನೆಗೆ ಮತ್ತೊಂದು ಗರಿ ಸೇರಿದಂತಾಗಿದೆ.
ಮಾರ್ಟಿನ್ ಗ್ರೂಪ್ನೊಂದಿಗೆ ತಮಿಳುನಾಡು ಮೂಲದ ಸ್ಟಾರ್ಟ್-ಅಪ್ ಸ್ಪೇಸ್ ಝೋನ್ ಇಂಡಿಯಾ ಅಭಿವೃದ್ಧಿಪಡಿಸಿದ ಮೂರು ಕ್ಯೂಬ್ ಉಪಗ್ರಹಗಳು ಮತ್ತು 50 PICO ಉಪಗ್ರಹಗಳನ್ನು ಹೊತ್ತ ರಾಕೆಟ್ ಅನ್ನು ಮೊಬೈಲ್ ಲಾಂಚರ್ ಬಳಸಿ ಉಪಕಕ್ಷೆಯ ಪಥಕ್ಕೆ ಉಡಾವಣೆ ಮಾಡಲಾಯಿತು.
ಈ ಉಪಗ್ರಹಗಳು ಜಾಗತಿಕ ತಾಪಮಾನ ಮತ್ತು ಹವಾಮಾನ ಬದಲಾವಣೆಯ ಸಂಶೋಧನಾ ಉದ್ದೇಶಗಳಿಗಾಗಿ ಡೇಟಾ ಮತ್ತು ಮಾಹಿತಿಯನ್ನು ಸಂಗ್ರಹಿಸುತ್ತವೆ. RHUMI-1 ರಾಕೆಟ್ ದಕ್ಷತೆಯನ್ನು ಸುಧಾರಿಸಲು ಮತ್ತು ಕಾರ್ಯಾಚರಣೆಯ ವೆಚ್ಚವನ್ನು ಕಡಿಮೆ ಮಾಡಲು ದ್ರವ ಮತ್ತು ಘನ ಇಂಧನ ಪ್ರೊಪೆಲ್ಲಂಟ್ ಸಿಸ್ಟಮ್ಗಳು ಅನುಕೂಲಕರವಾಗಿವೆ.