ಬೆಂಗಳೂರು: ಕ್ರಿಸ್ಮಸ್ ಹಬ್ಬದ ಅಲಂಕಾರದ ವಿಚಾರಕ್ಕೆ ಮಾಲ್ಗೆ ನುಗ್ಗಿ ಗಲಾಟೆ ಮಾಡಿರೋ ಆರೋಪ ಹಿನ್ನೆಲೆ ರಾಷ್ಟ್ರ ರಕ್ಷಣಾ ಪಡೆ ಸಂಘಟನೆ ಮುಖಂಡ ಪುನೀತ್ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿ ಮೇಲೆ ಮತ್ತೊಂದು ಎಫ್ಐಆರ್ ದಾಖಲು ಮಾಡಲಾಗಿದೆ. ನಿನ್ನೆ ಏಷ್ಯಾ ಮಾಲ್ ಬಳಿ ಹೋಗಿದ್ದ ಪುನೀತ್ ಕೆರೆಹಳ್ಳಿ ಮತ್ತು ಸಂಗಡಿಗರು. ಈ ವೇಳೆ ಯಾಕೆ ಕ್ರಿಸ್ಮಸ್ ಟ್ರೀ ಗಳ ಅಲಂಕಾರ ಮಾಡಿದ್ದೀರ ಅಂತಾ ಮಾಲ್ ಸಿಬ್ಬಂದಿಯೊಂದಿಗೆ ಗಲಾಟೆ ಮಾಡಿರುವ ಪುನೀತ್ ಕೆರೆಹಳ್ಳಿ,
iPhone 16 ಲೈನ್ಅಪ್ ಬಗ್ಗೆ ನಿಮಗೇನು ಗೊತ್ತು?: A18 ಚಿಪ್ ಯಾಕೆ ಹಾಕ್ತಾರೆ ಗೊತ್ತಾ?
ಸಹಚರರು. ಕ್ರಿಸ್ಮಸ್ ಟ್ರೀ ಅಲಂಕಾರ ಮಾಡಿದ್ದಲ್ಲದೇ 200 ರೂ ಎಂಟ್ರಿ ಫೀಸ್ ಬೇರೆ ಇಟ್ಟಿದ್ದೀರಾ? ಇದಕ್ಕೆ ಕಾನೂನು ಇದ್ಯಾ? ಹಿಂದೂ ಹಬ್ಬಗಳಿಗೆ ನೀವು ಇದೇ ರೀತಿಯ ಅಲಂಕಾರ ಮಾಡ್ತೀರ? 22-01-24 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಇದೆ. ಅವತ್ತೂ ಹೀಗೆ ಅಲಂಕಾರ ಮಾಡಬೇಕು. ಮಾಡದಿದ್ರೆ ಮಾಲ್ ಮುಂದೆ ಪ್ರತಿಭಟನೆ ನಡೆಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಹಿನ್ನೆಲೆ ಎಫ್ಐಆರ್ ದಾಖಲು ಮಾಡಲಾಗಿದೆ.