ಕಾಗದದ ಬಾಕ್ಸ್ ತಯಾರಿಕಾ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಗಂಗಮ್ಮನ ಗುಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ
ಫ್ಯಾಕ್ಟರಿಯಲ್ಲಿದ್ದ ಪೇಪರ್ ಬಾಕ್ಸ್ , ತಯಾರಿಕಾ ವಸ್ತುಗಳು ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ಸಾಮಗ್ರಿಗಳು ಸುಟ್ಟು ಕರಕಲಾಗಿವೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ.ಘಟನಾ ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಭೇಟಿ ನೀಡಿದ್ದು, ಬೆಂಕಿ ನಂದಿಸುವ ಕೆಲಸದಲ್ಲಿ ನಿರತರಾಗಿದ್ದಾರೆ.