ಬೆಂಗಳೂರು: ಬಿಬಿಎಂಪಿ ಅಗ್ನಿ ಅವಘಡ, ಅತ್ತಿ ಬೆಲೆ ಪಟಾಕಿ ದುರಂತ, ವೀರಭದ್ರ ನಗರದಲ್ಲಿ ಅಗ್ನಿಯ ವೀರಾವೇಷ. ಹೀಗೆ ಸಾಲು ಸಾಲು ಅಗ್ನಿ ಅವಘಡಗಳಿಂದ ಸಿಲಿಕಾನ್ ಮಂದಿ ಆಘಾತಕ್ಕೀಡಾಗಿದ್ದಾರೆ. ನಗರದಲ್ಲಿ ವರ್ಷದಿಂದ ವರ್ಷಕ್ಕೆ ಅಗ್ನಿ ಅವಘಡಗಳು ಹೆಚ್ಚಾಗ್ತಿವೆ.
ಇದೀಗ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪ್ಲಾಸ್ಟಿಕ್ ಕವರ್ ಗೋಡೌನ್ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಶಂಕಿಸಲಾಗಿದೆ.
Immunity Power: ಈ ಆಹಾರಗಳನ್ನು ತಿಂದ್ರೆ ಸಾಕು ನಿಮ್ಮ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತೆ..!
ಹೌದು ಬೆಂಗಳೂರಿನ ಬ್ಯಾಡರಹಳ್ಳಿ ಸಮೀಪ ಪ್ಲಾಸ್ಟಿಕ್ ಗೋಡೌನ್ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇನ್ನು ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮೂರು ಅಗ್ನಿ ಶಾಮಕ ವಾಹನ ಸಿಬ್ಬಂದಿಗಳಿಂದ ಬೆಂಕಿ ನಂದಿಸಲಾಗಿದ್ದು, ಬ್ಯಾಡರಹಳ್ಳಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.