ಮೈಸೂರು: ಸೌಥ್ ಇಂಡಿಯನ್ (SIPM) ಪೇಪರ್ ಮಿಲ್ಗೆ ಬೆಂಕಿ ಬಿದ್ದು ಲಕ್ಷಾಂತರ ಮೌಲ್ಯದ ಪೇಪರ್ ಸುಟ್ಟು ಭಸ್ಮವಾಗಿರುವ ಘಟನೆ ನಂಜನಗೂಡು ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ನಡೆದಿದೆ. ಬೆಳಗಿನ ಜಾವ ಪೇಪರ್ ಮಿಲ್ನ ಗೋಡಾನ್ನಲ್ಲಿ ಬೆಂಕಿ ಕಾಣಿಸಿಕೊಂಡಿತು.
HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ʼನಲ್ಲಿದೆ ಉದ್ಯೋಗಾವಕಾಶ..! ಬೆಂಗಳೂರಿನಲ್ಲಿಯೇ ಪೋಸ್ಟಿಂಗ್
ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ ಮೌಲ್ಯದ ಪೇಪರ್ ಸುಟ್ಟು ಕರಕಲಾಗಿದೆ. ವಿಷಯ ತಿಳಿಯುತ್ತಿದ್ದಂತೆ 6 ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿವೆ. ನಂಜನಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎನ್ನಲಾಗಿದೆ.