ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಬೆಂಗಳೂರು ಹೊರವಲಯದ ಆನೇಕಲ್ನ ಎಲೆಕ್ಟ್ರಾನಿಕ್ ಸಿಟಿಯ ಮೊದಲನೇ ಹಂತದಲ್ಲಿರುವ ಬಯೋಇನ್ನೊವೇಟಿವ್ ಸೆಂಟರ್ನಲ್ಲಿಅಗ್ನಿ ಅವಘಡ ಸಂಭವಿಸಿದೆ.
ಇಂದು ಬೆಳಗ್ಗೆ 4:40ರ ಸುಮಾರಿಗೆ ಈ ಅವಘಡ ಸಂಭವಿಸಿದ್ದು, ಬಯೋಇನ್ನೋವೇಟಿವ್ ರಿಸರ್ಚ್ ಸೆಂಟರ್ ಜಿ+2 ಕಟ್ಟಡದ 2ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಉದ್ಯೋಗಿಗಳು ಹೊರಗೆ ಓಡಿ ಬಂದಿದ್ದು,
ಅತಿಯಾಗಿ ಹಾಲು ಕುಡಿಯುವುದರಿಂದ ಇಷ್ಟೆಲ್ಲಾ ಸಮಸ್ಯೆಗಳು ಉಂಟಾಗುತ್ತವೆಯೇ..? ಈ ಸ್ಟೋರಿ ನೋಡಿ
ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಅಗ್ನಿಶಾಮಕ ಠಾಣೆ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.