ಬೆಂಗಳೂರು: ಮಹಿಳೆಯರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತೊಂದು ಗುಡ್ನ್ಯೂಸ್ ಕೊಟ್ಟಿದ್ದಾರೆ.
ಕರ್ನಾಟಕದಲ್ಲಿ ಒಟ್ಟು 2 ಸಾವಿರ ಕೋಟಿ ರೂಪಾಯಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಪ್ರತೀ ತಿಂಗಳು ವರ್ಗಾವಣೆ ಆಗುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳಿನಲ್ಲಿ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದಿದೆ. ಈಗಾಗಲೇ 6 ಕಂತುಗಳ ಮೂಲಕ ಸುಮಾರು 12,000 ರೂಪಾಯಿ ಹಣವನ್ನ ಪ್ರತೀ ಕುಟುಂಬದ ಮಹಿಳೆಯರು ಪಡೆದುಕೊಂಡಿದ್ದಾರೆ.
Bigg News: ಸುಮಲತಾಗೆ ಭಾರೀ ಠಕ್ಕರ್ ಕೊಟ್ಟ ಜೆಡಿಎಸ್: ಡಾ.ಮಂಜುನಾಥ್ ಸ್ಪರ್ಧೆಗೆ ಗ್ರೀನ್ ಸಿಗ್ನಲ್ ಕೊಟ್ಟ ಬಿಜೆಪಿ
ವಿಧಾನಸಭಾ ಅಧಿವೇಶನದಲ್ಲಿ ಶಾಸಕ ಯಶವಂತರಾಯ ಗೌಡ ಪಾಟೀಲ್ ಅವರು ಕೇಳಿದ ಪ್ರಶ್ನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉತ್ತರವನ್ನು ನೀಡಿದ್ದಾರೆ. ರಾಜ್ಯದಲ್ಲಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದ ಎಲ್ಲಾ ಮಹಿಳೆಯರಿಗೂ ಕೂಡ ಗೃಹಲಕ್ಷ್ಮೀ ಯೋಜನೆಯ ಪ್ರಯೋಜನ ಸಿಕ್ಕಿಲ್ಲ. ಇದರಿಂದಾಗಿ ಮಹಿಳೆಯರು ಇಲಾಖೆಗಳಿಗೆ ಅಲೆದು ಅಲೆದು ಸುಸ್ತಾಗಿದ್ದರು. ಈ ಕುರಿತು ರಾಜ್ಯದಲ್ಲಿ 8.20 ಲಕ್ಷ ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಯೋಜನೆ ನಗದು ಪಾವತಿ ಬಾಕಿ ಇದೆ ಎಂದಿದ್ದಾರೆ
ಪ್ರತೀ ತಿಂಗಳ 15 ನೇ ತಾರೀಕಿನ ಬಳಿಕ ಫಲಾನುಭವಿಗಳ ಖಾತೆಗೆ ಹಣವನ್ನು ಪಾವತಿ ಮಾಡಲಾಗುತ್ತದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಗೃಹಲಕ್ಷ್ಮೀ ಯೋಜನೆಗೆ ನೋಂದಾವಣೆ ಮಾಡಿಕೊಂಡಿರುವ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಆಧಾರ್ ನೋಂದಣಿಯಾಗಿಲ್ಲ. ಇನ್ನು ಕೆಲವರು ಈಕೆವೈಸಿ ಮಾಡಿಸಿಲ್ಲ. ಇದೇ ಕಾರಣದಿಂದಲೇ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದ್ದರೂ ಕೂಡ ಕೆಲವೊಬ್ಬರ ಖಾತೆಗೆ ಹಣ ವರ್ಗಾವಣೆ ಆಗಿರಲಲ್ಲ ಎಂದಿದ್ದಾರೆ.