ತುಮಕೂರು: ಕರ್ನಾಟಕದಲ್ಲಿ 4 ದಿನದ ಹಿಂದಷ್ಟೇ 3ನೇ ತರಗತಿ ಬಾಲಕಿಯೊಬ್ಬಳು ಹೃದಯಾಘಾತದಿಂದ ಸಾವನ್ನಪ್ಪಿರುವ ಸುದ್ದಿ ಕೇಳಿ ಇಡೀ ದೇಶವೇ ಬೆಚ್ಚಿಬಿದ್ದಿತ್ತು. ಇದೀಗ ಇದರ ಬೆನ್ನಲ್ಲೇ ಪ್ರಥಮ ಪಿಯುಸಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರಿನ ವಿನಾಯಕ ಕಾಲೇಜಿನಲ್ಲಿ ನಡೆದಿದೆ. 17 ವರ್ಷದ ಶಮಂತ್ ಎಂಬಾತ ಹೃದಯಾಘಾತಕ್ಕೆ ಬಲಿಯಾದ ವಿದ್ಯಾರ್ಥಿ.
Pumpkin Seeds: ಕುಂಬಳಕಾಯಿ ಬೀಜ ತಿಂದ್ರೆ ಈ ಆರೋಗ್ಯ ಸಮಸ್ಯೆಗಳು ಹತ್ತಿರವೂ ಸುಳಿಯಲ್ಲ!
ಕಾಲೇಜ್ನಲ್ಲಿದ್ದ ವಿದ್ಯಾರ್ಥಿ ಶಮಂತ್ ಚೆನ್ನಾಗಿಯೇ ಇದ್ದ. ಸ್ನೇಹಿತರ ಜೊತೆ ಮಾತನಾಡುತ್ತಿದ್ದ. ಹೀಗೆ ಮಾತುನಾಡುವ ವೇಳೆಯೇ ಏಕಾಏಕಿ ಕುಸಿದು ಬಿದ್ದಿದ್ದಾನೆ. ಅಷ್ಟರಲ್ಲಿ ಆತನನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ನಡೆಯಿತು. ಈ ವೇಳೆ ಮಾರ್ಗ ಮಧ್ಯೆಯೇ ಶಮಂತ್ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.