ಕಾಂತಾರ ಬೆಡಗಿ ಸಪ್ತಮಿ ಗೌಡ (Saptami Gowda) ದಿ ವ್ಯಾಕ್ಸಿನ್ ವಾರ್ ಮೂಲಕ ಬಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದರು. ಇದೀಗ ತಮ್ಮುಡು (Thammadu) ಚಿತ್ರದ ಮೂಲಕ ತೆಲುಗು (Telugu) ಸಿನಿಮಾ ರಂಗಕ್ಕೂ ಪ್ರವೇಶ ಮಾಡಿದ್ದಾರೆ. ಕನ್ನಡ, ಹಿಂದಿ ಮತ್ತು ತೆಲುಗಿನ ಚಿತ್ರಗಳನ್ನು ಒಪ್ಪಿಕೊಳ್ಳುವ ಮೂಲಕ ಬಹುಭಾಷಾ ತಾರೆಯಾಗಿದ್ದಾರೆ. ಜೊತೆಗೆ ಕನ್ನಡದಲ್ಲೇ ಅವರು ಮೂರು ಚಿತ್ರಗಳನ್ನು ಒಪ್ಪಿಕೊಂಡಿದ್ದಾರೆ.
ಯುವರಾಜಕುಮಾರ್ ನಾಯಕನಾಗಿ ನಟಿಸುತ್ತಿರುವ ಯುವ ಸಿನಿಮಾದಲ್ಲಿ ನಾಯಕಿಯಾಗಿ ಸಪ್ತಮಿ ಗೌಡ ನಟಿಸುತ್ತಿದ್ದಾರೆ. ಅವರು ಈ ಸಿನಿಮಾದಲ್ಲಿ ಸಿರಿ ಎನ್ನುವ ಪಾತ್ರ ಮಾಡುತ್ತಿದ್ದಾರೆ. ಅದೊಂದು ಡಿಗ್ಲಾಮರ್ ಪಾತ್ರ ಎಂದು ಹೇಳಲಾಗುತ್ತಿದೆ. ಕಾಲೇಜು ಹುಡುಗಿಯಾಗಿ ಈ ಸಿನಿಮಾದಲ್ಲಿ ಪಾತ್ರ ನಿರ್ವಹಿಸುತ್ತಿದ್ದಾರೆ ಸಪ್ತಮಿ. ಯುವರಾಜ್ ಕುಮಾರ್ ಈ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಲಾಂಚ್ ಆಗುತ್ತಿದ್ದು, ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಸಿನಿಮಾ ಮೂಡಿ ಬರುತ್ತಿದೆ.
ಯುವ ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾಗಿದ್ದೇ ಒಂದು ರೋಚಕ. ಶನಿವಾರ (ಫೆ.4)ರಂದು ಸಂಜೆ ಕೆಸಿಸಿ ಕಾರ್ಯಕ್ರಮಕ್ಕೆ ತನ್ನ ತಾಯಿಯೊಂದಿಗೆ ನಟಿ ಸಪ್ತಮಿ ತೆರಳುತ್ತಿದ್ದರು. ಈ ವೇಳೆ ಹೊಂಬಾಳೆ ಸಂಸ್ಥೆ ಟೀಂ ಕಡೆಯಿಂದ ನಟಿಗೆ ಕಾಲ್ ಬಂದಿದೆ. ಆಫೀಸ್ಗೆ ಬನ್ನಿ ಎಂದಷ್ಟೇ ಹೇಳಲಾಗಿದೆ. ಬಳಿದ ಚಿತ್ರತಂಡಕ್ಕೆ ಸಪ್ತಮಿ ಭೇಟಿ ನೀಡಿದ್ದಾರೆ. ಬಳಿಕ ಯುವ ರಾಜ್ಕುಮಾರ್ (Yuva Rajkumar) ಅವರ ಪಕ್ಕ ನಿಲ್ಲಿಸಿ ಫೋಟೋ ಕ್ಲಿಕ್ಕಿಸಲಾಗಿದೆ. ನಂತರ `ಯುವ’ ಚಿತ್ರಕ್ಕೆ ನೀವೇ ಹೀರೋಯಿನ್ ಎಂದು ಸರ್ಪ್ರೈಸ್ ನೀಡಿದ್ದಾರೆ.
ಪಾಪ್ ಕಾರ್ನ್ ಮಂಕಿ ಟೈಗರ್’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ರು. ಡಾಲಿಗೆ ನಾಯಕಿಯಾಗಿ ಮೊದಲ ಸಿನಿಮಾದಲ್ಲೇ ಸೈ ಎನಿಸಿಕೊಂಡರು. ಬಳಿಕ `ಕಾಂತಾರ’ (Kantara) ಚಿತ್ರದಲ್ಲಿ ರಿಷಬ್ ಶೆಟ್ಟಿಗೆ ಜೋಡಿಯಾದರು. ಮತ್ತೆ ಇದೀಗ ಡಾಲಿ ಜೊತೆಯೂ ಒಂದು ಚಿತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಉತ್ತರಕಾಂಡ ಸಿನಿಮಾದಲ್ಲೂ ಸಪ್ತಮಿ ಗೌಡ ನಟಿಸುತ್ತಿದ್ದಾರೆ.
ಪೈಲ್ವಾನ್ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿರುವ ಕೃಷ್ಣ ಇದೀಗ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ (Abhishek Ambarish) ಅವರಿಗೆ ಸಿನಿಮಾವೊಂದು ಮಾಡುತ್ತಿದ್ದು, ಈಗಾಗಲೇ ಚಿತ್ರಕ್ಕೆ ಕಾಳಿ ಎಂದು ಹೆಸರಿಡಲಾಗಿದೆ. ಈ ಸಿನಿಮಾಗೂ ಸಪ್ತಮಿಯೇ ನಾಯಕಿ. ಇನ್ನಷ್ಟೇ ಶೂಟಿಂಗ್ ಆರಂಭವಾಗಬೇಕು.