ಬೆಂಗಳೂರು:- ಸಚಿವ ಕೃಷ್ಣ ಬೈರೇಗೌಡರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದಿದ್ದು, ರಾಜ್ಯಪಾಲರಿಗೆ ದೂರು ಕೊಡಲಾಗಿದೆ. ಈ ಮೂಲಕ ರಾಜ್ಯದ ಮತ್ತೊಬ್ಬ ಸಚಿವರ ತಲೆದಂಡವಾಗುತ್ತಾ ಎಂಬ ಪ್ರಶ್ನೆ ಎದ್ದಿದೆ.
ಆಕೆ ನನ್ನ ಮರ್ಮಾಂಗಕ್ಕೆ ಕೈ ಹಾಕಿದಳು: 36ರ ಆಂಟಿ ಜೊತೆ 27ರ ಯುವ ವೈದ್ಯನ ಕುಚುಕುಚು! ಖಾಕಿ ತಲೆಕೆಡಿಸಿಕೊಂಡಿದ್ದೇಕೆ!?
ಕಂದಾಯ ಇಲಾಖೆಯಲ್ಲಿನ ಭ್ರಷ್ಟಾಚಾರಗಳಿಗೆ ಕಡಿವಾಣ ಹಾಕುತ್ತಿಲ್ಲ. ಭ್ರಷ್ಟಾಚಾರದಲ್ಲಿ ತೊಡಗಿರುವ ಅಧಿಕಾರಿಗಳ ರಕ್ಷಣೆ ಮಾಡುತ್ತಿದ್ದಾರೆ. ಹೀಗಾಗಿ ಸಚಿವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಹಗರಣಗಳ ತನಿಖೆ ನಡೆಸಿ ಸೂಕ್ತ ಕ್ರಮಕ್ಕೆ ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ದೂರು ನೀಡಿದ್ದಾರೆ.
ದೊಡ್ಡಬಳ್ಳಾಪುರದ ಹುಲಿಕುಂಟೆ ಗ್ರಾಮದ ಜಮೀನು ವ್ಯವಹಾರಕ್ಕೆ ಸಂಬಂಧಿಸಿದಂತೆ ಸರ್ವೇ ನಂಬರ್ 150ರಲ್ಲಿರುವ ಜಮೀನನ್ನು ಪೋಡಿ, ನಕ್ಷೆ ಆಗದೇ ಸಾಗುವಳಿದಾರರು ಕಾನೂನು ಬಾಹಿರವಾಗಿ ಮಾರಾಟ ಮಾಡಿದ್ದಾರೆ. ಪಲ್ಟಿತ್ ಡೆವಲಪರ್ಸ್ ಎಲ್ಎಲ್ಪಿ ಕಂಪನಿಗೆ ಮಾರಾಟ ಮಾಡಲಾಗಿದ್ದು, ತಹಶೀಲ್ದಾರ, ಉಪವಿಭಾಗಾಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ