ಬೆಂಗಳೂರು: ರೇಣುಕಾಸ್ವಾಮಿ ಕೇಸ್ನಲ್ಲಿ ಬಿಡುಗಡೆಯಾಗಿರುವ ನಟ ದರ್ಶನ್ ಗೆ ಮತ್ತೊಂದು ಭೀತಿ ಎದುರಾಗಿದೆ. ದರ್ಶನ್ ಜಾಮೀನು ಅರ್ಜಿ ಪ್ರಶ್ನಿಸಿ ಪೊಲೀಸರು ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಕೆ ಮಾಡಿದ್ದಾರೆ. ಈ ಅರ್ಜಿ ವಿಚಾರಣೆ ಜನವರಿ 24ರಂದು ನಡೆಯಲಿದೆ. ಒಂದೊಮ್ಮೆ ಜಾಮೀನು ರದ್ದಾದರೆ ದರ್ಶನ್ ಮತ್ತೆ ಜೈಲು ಸೇರಬೇಕಾಗುತ್ತದೆ.
ಜೂನ್ 11ರಂದು ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದರು. ಆ ಬಳಿಕ ಹಲವು ತಿಂಗಳು ಜೈಲಿನಲ್ಲಿ ಇದ್ದರು. ಕೆಳಹಂತದ ಕೋರ್ಟ್ನಲ್ಲಿ ಅವರ ಜಾಮೀನು ಅರ್ಜಿ ವಜಾ ಆಯಿತು. ಆ ಬಳಿಕ ಹೈಕೋರ್ಟ್ನಲ್ಲಿ ಅನಾರೋಗ್ಯದ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದ ಅವರು ನಂತರ ಪೂರ್ಣ ಪ್ರಮಾಣದ ಜಾಮೀನು ಪಡೆದುಕೊಂಡರು.
ಶುಕ್ರವಾರದಂದು ತಪ್ಪಿಯೂ ಈ ಕೆಲಸಗಳನ್ನು ಮಾಡದಿರಿ..! ಲಕ್ಷ್ಮೀ ಮುನಿಯುವುದು ಗ್ಯಾರೆಂಟಿ
ದರ್ಶನ್ ಜೊತೆ ಪವಿತ್ರಾಗೌಡ, ನಾಗರಾಜ್, ಲಕ್ಷ್ಮಣ್, ಅನುಕುಮಾರ್, ಜಗದೀಶ್ ಮತ್ತು ಪ್ರದೋಶ್ ಕೂಡ ಜಾಮೀನು ಪಡೆದಿದ್ದಾರೆ. ಇದನ್ನು ಸುಪ್ರೀಂನಲ್ಲಿ ಪ್ರಶ್ನಿಸಲಾಗಿದೆ. ಸುಪ್ರೀಂಕೋರ್ಟ್ನಲ್ಲಿ ಜ.24ರಂದು ಅರ್ಜಿ ವಿಚಾರಣೆ ನಡೆಸಲಿದೆ. ದರ್ಶನ್, ಪವಿತ್ರಾ ಸೇರಿ 7 ಆರೋಪಿಗಳ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಜನವರಿ 6ರಂದು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈಗ ಅರ್ಜಿ ವಿಚಾರಣೆಗೆ ದಿನಾಂಕ ನಿಗದಿ ಮಾಡಿದೆ.