ಬೀದರ್ :- ಬೀದರ್ನ ಎಸ್ಬಿಐ ಬ್ಯಾಂಕ್ ಎದುರು ನಡೆದ ದರೋಡೆ, ಶೂಟೌಟ್ ಪ್ರಕರಣ ಮರೆ ಮಾಚುವ ಮುನ್ನವೇ ಔರಾದ್ ತಾಲೂಕಿನ ಕೌಠಾ(ಬಿ) ಗ್ರಾಮದ ಮನೆಯೊಂದಕ್ಕೆ ನುಗ್ಗಿದ ಖದೀಮರು ಒಂಟಿ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ೨೫ ಲಕ್ಷ ಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ನಡೆದಿದೆ.
ಕಲಬುರಗಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಮಹಾರಾಷ್ಟ್ರದಲ್ಲಿ ಶವವಾಗಿ ಪತ್ತೆ
ಪ್ರೀತಿ ಓಂಕಾರ ಗಾದಗೆ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ಯಾರು ಇಲ್ಲದಿದ್ದಾಗ ಮಧ್ಯಾಹ್ನ ವೇಳೆ ಮನೆಯ ಹಿಂಬಾಗಿಲು ಮುರಿದು ಒಳಗೆ ನುಗ್ಗಿದ ಮುಸುಕುಧಾರಿ ಇಬ್ಬರು ಕಳ್ಳರು ಒಂಟಿ ಮಹಿಳೆಗೆ ಹಣ ಮತ್ತು ಚಿನ್ನಾ ಭರಣ ನೀಡಲು ಬೆದರಿಕೆವೊಡ್ಡುವ ಜತೆಗೆ ಚಾಕುವಿನಿಂದ ಕೈ ಮತ್ತು ಭುಜದ ಚುಚ್ಚಿದ್ದಾರೆ. ನಂತರ ಗ್ಯಾಸ್ ಒಲೆಯ ಮೇಲೆ ಚಾಕು ಕಾಯಿಸಿ ಕೈ ಮೇಲೆ ಚುಚ್ಚಿ ಚಿತ್ರಹಿಂಸೆ ನೀಡಿದ್ದು, ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಂತಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದರೋಡೆಕೋರರ ಹಲ್ಲೆಯೊಳಗಾದ ಮಹಿಳೆಗೆ ಬೀದರ್ನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.