ಬೆಳಗಾವಿ: ಕರ್ನಾಟಕದಲ್ಲಿ ಫೈನಾನ್ಸ್ ಕಿರುಕುಳ ದಿನೇ ದಿನೇ ಹೆಚ್ಚಾಗಿದ್ದು, ಆತ್ಮಹತ್ಯೆ ಪ್ರಕರಣಗಳು ಕೂಡ ಹೆಚ್ಚಾಗುತ್ತಿದೆ. ಅದರಂತೆ ಮತ್ತೊಂದು ಆತ್ಮಹತ್ಯೆ ಕೇಸ್ ದಾಖಲಾಗಿದೆ.
ಬೆಳಗಾವಿ ತಾಲೂಕಿನ ಯಮನಾಪುರ ಗ್ರಾಮದ ಹೊರ ವಲಯದಲ್ಲಿ ಫೈನಾನ್ಸ್ ಕಿರುಕುಳ ತಾಳಲಾರದೆ ಬಾವಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ.
ಕಿರಬಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ಗುರುತಿಸಲಾಗಿದೆ. ಮಹಿಳೆಗೆ ಫೈನಾನ್ಸ್ನಲ್ಲಿ ಸಬ್ಸಿಡಿ ಎಂದು ಹೇಳಿ ಹೊಳೆಪ್ಪ ದಡ್ಡಿ ಎಂಬುವವರು 2.30 ಲಕ್ಷ ರೂ. ಕೊಡಿಸಿದ್ದ. ಕೊಡಿಸಿದ ಅರ್ಧದಷ್ಟು ಸಾಲ ತನಗೆ ಕೊಟ್ಟರೆ ತಾನೇ ಸಾಲ ಕಟ್ಟುವುದಾಗಿ ಹೇಳಿದ್ದ. ಆದರೆ ಆತನ ನಂಬಿ ಸಾಲ ಪಡೆದು ಅರ್ಧದಷ್ಟು ಹಣವನ್ನು ಸರೋಜಾ ಹೊಳೆಪ್ಪಗೆ ನೀಡಿದ್ದರು. ಅರ್ಧ ಸಾಲ ಕಟ್ಟಿದ ಬಳಿಕ ಫೈನಾನ್ಸ್ನಿಂದ ಪೂರ್ತಿ ಸಾಲ ಕಟ್ಟಲು ಸೂಚನೆ ನೀಡಿದ್ದಾರೆ. ಈ ವೇಳೆ ತಾನೂ ಹಣ ಕಟ್ಟುವುದಿಲ್ಲ, ಸಬ್ಸಿಡಿಯಾಗಿ ಸಾಲ ಪಡೆದಿದ್ದೇನೆ ಎಂದು ಸರೋಜ ಹೇಳಿದ್ದಾರೆ. ತಾವು ಸಬ್ಸಿಡಿ ಸಾಲ ಕೊಟ್ಟಿಲ್ಲ ಪೂರ್ತಿ ಹಣ ಕಟ್ಟಿ ಎಂದು ಫೈನಾನ್ಸ್ ಸಿಬ್ಬಂದಿ ನಿತ್ಯ ಕಿರುಕುಳ ನೀಡಿದ್ದಾರೆ. ಕಿರುಕುಳ ತಾಳಲಾರದೇ ಸರೋಜಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.