ಬೆಂಗಳೂರು: ಮೊಹಮ್ಮದ್ ಶಮಿ, ಶಿಖರ್ ಧವನ್, ಅಷ್ಟೇ ಏಕೆ ಇತ್ತೀಚೆಗಷ್ಟೇ ಹಾರ್ದಿಕ್ ಪಾಂಡ್ಯ ವಿಚ್ಚೇದನ ಪಡೆದುಕೊಂಡ್ರು. ಈ ಹಿಂದಿನ ಸೂಪರ್ ಸ್ಟಾರ್ಗಳಾದ ವಿನೋದ್ ಕಾಂಬ್ಳಿ, ರವಿ ಶಾಸ್ತ್ರಿ, ಮೊಹಮ್ಮದ್ ಅಜರುದ್ದೀನ್ ಅವ್ರ ಕಥೆನೂ ಇದೆ. ಈ ಲಿಸ್ಟ್ಗೆ ಸ್ಪಿನ್ನರ್ ಯುಜುವೇಂದ್ರ ಚಹಲ್ ಸೇರಿದ್ದಾರೆ. ಒಬ್ಬರಾದ ಮೇಲೆ ಒಬ್ರ ದಾಂಪತ್ಯ ಜೀವನ ಸೂತ್ರ ಹರಿದ ಗಾಳಿಪಟವಾದಂತೆ ಆಗ್ತಿದೆ. ಇದೀಗ ಮತ್ತೊಂದು ಸ್ಟಾರ್ ಜೋಡಿಯ ವೈಯಕ್ತಿಕ ಬದುಕಿನಲ್ಲಿ ಬಿರುಕು ಮೂಡಿದೆ ಎಂದು ವರದಿಯಾಗಿದೆ.
ಹೌದು ನೀಶ್ ಪಾಂಡೆ ಹಾಗೂ ಅವರ ಮಡದಿ ಆಶ್ರಿತಾ ಶೆಟ್ಟಿ ನಡುವೆ ವೈಮನಸ್ಸು ಮೂಡಿದ್ದು, ಈ ಇಬ್ಬರು ಕೂಡ ವಿಚ್ಛೇದನ ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸ್ಟಾರ್ ಜೋಡಿ ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪರಸ್ಪರ ಅನ್ಫಾಲೋ ಮಾಡಿದ್ದಾರೆ. ಇದರ ಜೊತೆಗೆ ಇಬ್ಬರ ಖಾತೆಯಿಂದಲೂ ಇಬ್ಬರು ಜೊತೆಗಿರುವ ಫೋಟೋಗಳನ್ನು ಡಿಲೀಟ್ ಮಾಡಲಾಗಿದೆ.
Sour Curd: ಹುಳಿ ಬಂದ ಮೊಸರಿನ ಸೇವನೆ ಆರೋಗ್ಯಕ್ಕೆ ಒಳ್ಳೆಯದೋ ಕೆಟ್ಟದ್ದೋ.? ಇಲ್ಲಿದೆ ಮಾಹಿತಿ
ಹೀಗಾಗಿ ಈ ಇಬ್ಬರ ಸಂಬಂಧದಲ್ಲಿ ಬಿರುಕು ಮೂಡಿದೆ ಎಂದು ಹೇಳಲಾಗುತ್ತಿದೆ. ಆದಾಗ್ಯೂ ಈ ಇಬ್ಬರು ಕೂಡ ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಹೀಗಾಗಿ ಮುಂಬರುವ ದಿನಗಳಲ್ಲಿ ಈಗ ಹಬ್ಬಿರುವ ವದಂತಿಗೆ ಈ ಸ್ಟಾರ್ ದಂಪತಿಗಳು ಯಾವ ರೀತಿಯ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.
ಕನ್ನಡಿಗ ಮನೀಶ್ ಪಾಂಡೆ ಹಾಗೂ ಆಶ್ರಿತಾ ಶೆಟ್ಟಿ 2019 ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರು. ಕರ್ನಾಟಕದವರೇ ಆಗಿರುವ ಆಶ್ರಿತಾ ತಮಿಳು ಚಿತ್ರಗಳಲ್ಲೂ ಕೆಲಸ ಮಾಡಿದ್ದಾರೆ. ಮದುವೆಯ ನಂತರ, ಅವರು ಅನೇಕ ಬಾರಿ ಐಪಿಎಲ್ ಪಂದ್ಯಗಳಲ್ಲಿ ತನ್ನ ಪತಿಯನ್ನು ಬೆಂಬಲಿಸಲು ಮೈದಾನಕ್ಕೆ ಬಂದಿದ್ದರು. ಆದರೆ ಐಪಿಎಲ್ 2024 ರ ಸಮಯದಲ್ಲಿ ಅವರು ಕ್ರೀಡಾಂಗಣದಲ್ಲಿ ಕಾಣಿಸಿಕೊಂಡಿರಲಿಲ್ಲ. ಮನೀಶ್ ಪಾಂಡೆ ಐಪಿಎಲ್ 2024 ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ನ ಭಾಗವಾಗಿದ್ದರು.