ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಜ್ಕುಮಾರ್ ರಸ್ತೆಯಲ್ಲಿನ ಒಕಿನೊವಾ ಎಲೆಕ್ಟ್ರಿಕ್ ಬೈಕ್ ಶೋರೂಮ್ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಬ್ಯಾಟರಿ ಓವರ್ ಚಾರ್ಜ್ ಆಗಿ ಸ್ಫೋಟಿಸಿದ ಹಿನ್ನೆಲೆ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.
ಬೆಂಕಿ ಕಾಣಿಸಿಕೊಂಡ ಕೂಡಲೇ ಶೋರೂಮ್ನಲ್ಲಿದ್ದ ಸಿಬ್ಬಂದಿ ಹೊರಗೆ ಓಡಿ ಬಂದಿದ್ದಾರೆ. ಇದರಿಂದ ಯಾವುದೇ ಪ್ರಾಣ ಹಾನಿಯಾಗಿಲ್ಲ. ಆದ್ರೆ, ಕಟ್ಟಡ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದ್ದು, ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.
Periods: ಮಹಿಳೆಯರೇ ಗಮನಿಸಿ.. ಮುಟ್ಟಿನ ಸಮಯದಲ್ಲಿ ಮೊಸರು ತಿನ್ನಬಹುದೇ..? ಇಲ್ಲಿದೆ ಮಾಹಿತಿ
ಇನ್ನು ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಾಜಾಜಿನಗರದ ರಾಜ್ಕುಮಾರ್ ರಸ್ತೆಯಲ್ಲಿರುವ ಎಲೆಕ್ಟ್ರಿಕ್ ಬೈಕ್ ಶೋರೂಮ್ನಲ್ಲಿ ಒಟ್ಟು 74 ಬೈಕ್ಗಳು ಇದ್ದವು. ಈ ಪೈಕಿ 30 ಬೈಕ್ಗಳು ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, 9 ಬೈಕ್ಗಳಿಗೆ ಸ್ವಲ್ಪ ಹಾನಿಯಾಗಿದೆ ಎಂದು ತಿಳಿದುಬಂದಿದೆ.