ಕೋಲಾರ :- ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕು ಎಸ್.ಜೀಡಮಾಕಲಪಲ್ಲಿ ಗ್ರಾಮದಲ್ಲಿ ಅಕ್ರಮ ಸಂಬಂಧ ಹೊಂದಿದ್ದ ಯುವಕ ಹಾಗೂ ಮಹಿಳೆ ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂದಿದ್ದಾರೆ.
ಅನಸೂಯ (35) ಹಾಗೂ ವಿಜಯ್ ಕುಮಾರ್(28) ಆತ್ಮಹತ್ಯೆ ಮಾಡಿಕೊಂಡವರು. ಅನಸೂಯಗೆ ಮದುವೆಯಾಗಿ ಎರಡು ಮಕ್ಕಳು ಇದ್ದರೂ ಸಹ ಸಹ ಅವಿವಾಹಿತ ಯುವಕ ವಿಜಯ್ ಕುಮಾರ್ನೊಂದಿಗೆ ಅಕ್ರಮ ಸಂಬಂಧವಿತ್ತು. ಅಲ್ಲದೇ ಇವರಿಬ್ಬರು ಕಳೆದ ಎರಡು ತಿಂಗಳ ಹಿಂದೆ ಊರು ಬಿಟ್ಟು ನಾಪತ್ತೆಯಾಗಿದ್ದರು. ಆದ್ರೆ, ಇದೀಗ ಗ್ರಾಮಕ್ಕೆ ಬಂದು ಏಕಾಏಕಿ ಒಂದೇ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಅನಸೂಯ, ಮಂಜುನಾಥ್ ಎನ್ನುವರೊಂದಿಗೆ ಮದುವೆಯಾಗಿದ್ದು, ಈಗಾಗಲೇ ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ. ಇನ್ನು ವಿಜಯ್ ಕುಮಾರ್ ಮದುವೆಯಾಗಿರಲಿಲ್ಲ. ಅನಸೂಯ ಮತ್ತು ವಿಜಯ್ ಕುಮಾರ್ ನಡುವೆ ಅಕ್ರಮ ಸಂಬಂಧವಿತ್ತು. ಅಲ್ಲದೇ ಈ ಜೋಡಿ ಮನೆ ಬಿಟ್ಟು ಓಡಿ ಹೋಗಿತ್ತು. ಈಗ ಇಬ್ಬರು ಕಳೆದ ರಾತ್ರಿ ಗ್ರಾಮದ ಹೊರಗಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.