ಇದೇ ಪ್ರಥಮ ಬಾರಿಗೆ ರಾಜಧಾನಿ ಬೆಂಗಳೂರಿನಲ್ಲಿ (Bengaluru) ನಡೆಯಲಿರುವ ‘ಬೆಂಗಳೂರು ಕಂಬಳ’ಕ್ಕೆ (Kambala) ಕನಿಷ್ಠ 3ರಿಂದ 5 ಲಕ್ಷ ಜನರು ಬರುವ ನಿರೀಕ್ಷೆ ಇದ್ದು, ಅದಕ್ಕೆ ತಕ್ಕಂತೆ ತಯಾರಿ ಮಾಡಿಕೊಳ್ಳಲಾಗುತ್ತಿದೆ ಎಂದು ಬೆಂಗಳೂರು ಕಂಬಳ ಸಮಿತಿ (ರಿ.) ಗೌರವಾಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಹೇಳಿದರು.
ಮಂಡಿ ನೋವು, ಸಂದಿ ನೋವುಗಳಿಂದ ಜೀವನದಲ್ಲಿ ಬೇಸತ್ತಿದ್ದರೆ ಇದೊಂದು ಚಿಕಿತ್ಸೆ ಪ್ರಯತ್ನ ಮಾಡಿ: ಉಚಿತ ಸಲಹೆ
ಈ ಬಾರಿ ನಡೆಯಲಿರುವ ಬೆಂಗಳೂರು ಕಂಬಳಕ್ಕೆ ಬಾಲಿವುಡ್ ನಟಿ ಐಶ್ವರ್ಯಾ ರೈ(Aishwarya Rai), ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ (Anushka Shetty) ಸೇರಿದಂತೆ ವಿವಿಧ ಚಿತ್ರರಂಗಗಳಲ್ಲಿ ಇರುವ ಕರಾವಳಿ ಮೂಲದ ಸಿನಿಮಾತಾರೆಯರು ಆಗಮಿಸಲಿದ್ದಾರೆ ಎಂದು ಸಮಿತಿ ಸಂಘಟನಾ ಅಧ್ಯಕ್ಷ ಉಮೇಶ್ ಶೆಟ್ಟಿ ತಿಳಿಸಿದ್ದಾರೆ.
ನವೆಂಬರ್ 25, 26ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳ ತಯಾರಿ ಸಲುವಾಗಿ ಇಂದು ಬೆಂಗಳೂರಿನ ಬಂಟರ ಸಂಘದಲ್ಲಿ ಕರಾವಳಿಯ ವಿವಿಧ ಜಾತಿ-ಭಾಷಾ ಸಂಘಟನೆಗಳ ಜೊತೆ ನಡೆದ ಬೃಹತ್ ಸಮಾಲೋಚನಾ ಸಭೆ ಬಳಿಕ ಆಯೋಜಿಸಿದ ಬಹಿರಂಗ ಸಮಾವೇಶದಲ್ಲಿ ಅವರು ಈ ವಿಷಯ ತಿಳಿಸಿದರು.