ಹುಬ್ಬಳ್ಳಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ನಗರ ಮತ್ತು ಗ್ರಾಮೀಣ ಘಟಕಗಳ ಸಂಯುಕ್ತಾಶ್ರಯದಲ್ಲಿ ಶಾಸಕ ಪ್ರಸಾದ ಅಬ್ಬಯ್ಯ ಅವರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಸಂಘದ ನಗರ ಘಟಕದ ಅಧ್ಯಕ್ಷ ಡಾ. ಪ್ರಹ್ಲಾದ ಗೆಜ್ಜಿ ಮತ್ತು ಗ್ರಾಮೀಣ ಅಧ್ಯಕ್ಷ ವಿ.ಎಫ್. ಚುಳಕಿ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ಮಳೆ ಅವಾಂತರ: ಅಂಕೋಲಾ ಹೆದ್ದಾರಿಯಲ್ಲಿ ಗುಡ್ಡ ಕುಸಿತ, 6 ಜನರ ಮೃತದೇಹಗಳು ಪತ್ತೆ!
ಏಳನೇ ವೇತನ ಆಯೋಗದ ಶಿಫಾರಸಿನಂತೆ ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳನ್ನು ಯಥಾವತ್ತಾಗಿ ಜಾರಿ ಮಾಡಬೇಕು. ನೂತನ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆಪಿಂಚಣಿ ಯೋಜನೆ ಮರು ಜಾರಿಗೊಳಿಸಬೇಕು.
ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಮನವಿ ಮಾಡಲಾಯಿತು. ಮನವಿ ಸ್ವೀಕರಿಸಿದ ಶಾಸಕ ಪ್ರಸಾದ ಅಬ್ಬಯ್ಯ ಅವರು, ನಮ್ಮ ಸರ್ಕಾರ ನೌಕರರ ಹಿತ ಕಾಯುವಲ್ಲಿ ಮುಂಚೂಣಿಯಲ್ಲಿದೆ. 6ನೇ ವೇತನ ಆಯೋಗದಿಂದ ಶೀಘ್ರ ವರದಿ ಪಡೆದು ಶೇ. 30-ರಷ್ಟು ಲಾಭ ನೀಡಿ ಇತಿಹಾಸ ನಿಮಿರ್ಸಿದೆ. ಈಗಲೂ ಸರ್ಕಾರ ನೌಕರರ ಬೇಡಿಕೆಗಳನ್ನು ಈಡೇರಿಸಲು ಸಿದ್ಧವಿದೆ.
ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದಾಗಿ ಸ್ವಲ್ಪ ತಡವಾಗಿದೆ.
ನೌಕರರ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿ ಕೊಡಲಾಗುವುದು ಎಂದರು.
ನಗರ ಮತ್ತು ಗ್ರಾಮೀಣ ಶಾಖೆಯ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು, ವೃಂದ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ತಾಲೂಕಿನ ವಿವಿಧ ಇಲಾಖೆಗಳ ನೌಕರರು, ಶಿಕ್ಷಕರು ಭಾಗವಹಿಸಿದ್ದರು.