ನೆಲಮಂಗಲ:- ಪತ್ರಕರ್ತನ ಮೇಲೆ ಹಲ್ಲೆ ನಡೆಸಿ ಪುಂಡ ಪೋಕರಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ನೆಲಮಂಗಲದ ತಹಶೀಲ್ದಾರ್ ಗೆ ಮನವಿ ಸಲ್ಲಿಸಲಾಗಿದೆ.
ಹೌದು,ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಸೀಕ್ರೆಟ್ ಆಫ್ ಓಷನ್ ಹೋಟೆಲ್ ಬಳಿ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕೆಲವು ಪುಂಡು ಪೋಕರಿಗಳು ಮಧ್ಯದ ಅಮಲಿನಲ್ಲಿ ಗಲಾಟೆ ಮಾಡುತ್ತಿದ್ದರು.
ಗಲಾಟೆಯ ಸುದ್ದಿ ತಿಳಿದು ವರದಿ ಮಾಡಲು ತೆರಳಿದ್ದ ಖಾಸಗಿ ವಾಹಿನಿಯ ವರದಿಗಾರನ ಮೇಲೆ ಹಲ್ಲೆ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿ ಕ್ಯಾಮರಾ ಕಸಿಯಲು ಮುಂದಾಗಿರುತ್ತಾರೆ. ಸ್ಥಳದಲ್ಲಿದ್ದ ಪೊಲೀಸರು ಯಾವುದೆ ರೀತಿಯ ಕ್ರಮವನ್ನು ಕೈಗೊಳ್ಳುವುದಿಲ್ಲ. ಪೋಲಿಸ್ ಠಾಣೆಗೆ ದೂರು ನೀಡಿ 3 ದಿನ ಆದರೂ ಇದುವರೆಗೂ ಪೊಲೀಸರು ಪುಂಡು ಪೋಕರಿಗಳ ವಿರುದ್ಧ ಯಾವುದೇ ರೀತಿಯ ಕ್ರಮವನ್ನು ಜರುಗಿಸಿರುವುದಿಲ್ಲ.
ಇದನ್ನು ಖಂಡಿಸಿ, ಕೂಡಲೆ ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ದ್ವನಿ ನೆಲಮಂಗಲ ತಾಲೂಕು ಘಟಕದ ಅಧ್ಯಕ್ಷ ಗುರುಪ್ರಸಾದ್ ನೇತೃತ್ವದಲ್ಲಿ ಮುಖ್ಯಮಂತ್ರಿಗಳಿಗೆ ತಹಸೀಲ್ದಾರ್ ಮುಖಾಂತರ ಮನವಿ ಸಲ್ಲಿಸಲಾಗಿದೆ.