ಬೆಂಗಳೂರು :ಬೆಂಗಳೂರು ಮೆಟ್ರೋದಲ್ಲಿ ಇಂಜಿನಿಯರಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು 19 ಹುದ್ದೆಗಳು ಖಾಲಿ ಇದ್ದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅಲ್ಲದೇ ಅರ್ಜಿ ಸಲ್ಲಿಸಲು 2022 ರ ಜನವರಿ 17 ರಂದು ಕೊನೆಯ ದಿನಾಂಕವಾಗಿದ್ದು,
ಗುತ್ತಿಗೆ ಮಾದರಿಯಲ್ಲಿ ಮೂರು ವರ್ಷದ ಅವಧಿಗೆ ಆಯ್ಕೆ ಮಾಡಲಾಗುತ್ತದೆ. ಪ್ರಸ್ತುತ ಅದೇ ಹುದ್ದೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಅರ್ಜಿ ಸಲ್ಲಿಸಲು ಅರ್ಹರಲ್ಲ ಎಂದು ಸೂಚಿಸಿದೆ. ಇನ್ನೂ ಆಯಾ ಹುದ್ದೆಗಳಿಗೆ ತಕ್ಕಂತೆ ಕಾರ್ಯಕ್ಷೇತ್ರದ ಅನುಭವ ಇರಬೇಕು ಎಂದು ಮೆಟ್ರೋ ಸಂಸ್ಥೆ ಮಾಹಿತಿ ನೀಡಿದೆ.
