ಶಿವಮೊಗ್ಗ:- ಶಾಲೆಗಳಲ್ಲಿ ಶೂ ಬದಲು ಚಪ್ಪಲಿ ನೀಡಿದ್ದರೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಶಾಲಾ ಮಕ್ಕಳಿಗೆ ಶೂ ಬದಲು ಚಪ್ಪಲಿ ನೀಡಿದ್ದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಮೊಟ್ಟೆ ಮತ್ತು ಶೂ ವಿತರಣೆ ವಿಚಾರದಲ್ಲಿ ಯಾರೇ ತಪ್ಪು ಮಾಡಿದ್ದರೂ ಕ್ರಮ ಕೈಗೊಳ್ಳುವುದು ಪಕ್ಕಾ.
ಬರಗಾಲದಲ್ಲಿ ರೈತರ ಸಾಲ ಮನ್ನಾ ಬಗ್ಗೆ ಈಗಲೇ ಚಿಂತನೆ ಮಾಡುವ ಅಗತ್ಯ ಇಲ್ಲ, ಮುಂದೆ ನೋಡೋಣ.
ಮಲೆನಾಡಿನಲ್ಲಿ ಕಾಡಾನೆ ಹಾವಳಿ ನಿಯಂತ್ರಣಕ್ಕೆ ಅರಣ್ಯಾಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದು, ಅಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ ಎಂದರು.