ಬೆಂಗಳೂರು: ಇತ್ತೀಚಿನ ಕೆಲವು ದಿನಗಳಿಂದ ಬಿಜೆಪಿಯೊಳಗಿನ ವಾತಾವರಣದಿಂದ ಹತಾಶರಾಗಿ ಪದೇ ಪದೇ ತಮ್ಮ ಅಸಮಾಧಾನವನ್ನು ಕೆಲವೊಮ್ಮೆ ಪ್ರತ್ಯಕ್ಷೇವಾಗಿ ಮಗದೊಮ್ಮೆ ಪರೋಕ್ಷವಾಗಿ ಹೊರಹಾಕುತ್ತಿದ್ದ ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಅವರು, ಮತ್ತೊಮ್ಮೆ ಮಾಧ್ಯಮಗಳ ಮುಂದೆ ಮುಖಾಮುಖಿಯಾಗಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಪಕ್ಷದ ವಿರುದ್ಧ ಸಾರ್ವಜನಿಕವಾಗಿ ಮಾತನಾಡುತ್ತಿರುವ ನಾಯಕರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೊರೊನಾ ಸಂದರ್ಭದಲ್ಲಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿಯಿಂದ 40 ಸಾವಿರ ಕೋಟಿ ರೂ. ಹಗರಣವಾಗಿದೆ ಎಂದು ಬಿಜೆಪಿ ನಾಯಕ ಯತ್ನಾಳ್ ಅವರೇ ಖುದ್ದಾಗಿ ಬಿಜೆಪಿ ವಿರುದ್ಧ ಆರೋಪ ಮಾಡಿದ್ದು ಅದರಿಂದ ಪಕ್ಷಕ್ಕೆ ತೀವ್ರವಾಗಿ ಮುಜುಗರವಾಗಿದೆ. ಈ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಅವರ ವಿಚಾರ ಪ್ರಸ್ತಾಪ ಮಾಡಿದ ಸದಾನಂದ ಗೌಡರು, ಅವರನ್ನು ಹಿಂದೆ ಪಕ್ಷದಲ್ಲೇ ಉಳಿಸಿಕೊಂಡಿದ್ದಕ್ಕೆ ಈಗ ಅನುಭವಿಸುತ್ತಿದ್ದೇವೆ ಎಂದು ಅವರು ಹರಿಹಾಯ್ದಿದ್ದಾರೆ.
ದಿಗಂತ್’ಗೆ ಕಿಚ್ಚ ಸಾಥ್..! ”ಎಡಗೈ ಅಪಘಾತಕ್ಕೆ ಕಾರಣ” ಸಿನಿಮಾದ ಟೀಸರ್ ರಿಲೀಸ್ ಮಾಡಲಿದ್ದಾರೆ ಸುದೀಪ್
ಆನಂತರ, “ಆಗೊಮ್ಮೆ ಯತ್ನಾಳ್ ಅವರು ಪಕ್ಷಕ್ಕೆ ಮುಜುಗರ ತರುವಂತೆ ಮಾತನಾಡಿದಾಗ ಅವರನ್ನು ಪಕ್ಷದಿಂದ ಅಮಾನತು ಮಾಡಿದ್ದೆ. ಆದರೆ, ಆಗ ಯಡಿಯೂರಪ್ಪ ಅವರೇ ಖುದ್ದಾಗಿ ನನ್ನನ್ನು ಸಂಪರ್ಕಿಸಿ ಯತ್ನಾಳ್ ಅವರ ಅಮಾನತು ಆದೇಶವನ್ನು ಹಿಂಪಡೆಯುವಂತೆ ಸೂಚಿಸಿದ್ದರು. ಹಾಗಾಗಿ, ಅವರನ್ನು ಪುನಃ ಪಕ್ಷಕ್ಕೆ ಸೇರಿಸಿಕೊಳ್ಳಲಾಯಿತು. ಆದರೆ, ಅದರ ಫಲವನ್ನು ಈಗ ಅನುಭವಿಸುತ್ತಿದ್ದೇವೆ” ಎಂದ ಸದಾನಂದ ಗೌಡರು, “ಯತ್ನಾಳ್ ಹಾಗೂ ಇನ್ನಿತರರ ವಿರುದ್ದ ಸೂಕ್ತ ಕ್ರಮ ಜರುಗಲೇಬೇಕು ಎಂದು ಆಗ್ರಹಿಸಿದ್ದಾರೆ.