ಒಂದು ತಿಂಗಳ ಕಾಲ ಚಹಾ ಸೇವನೆ ಮಾಡದಿರುವುದು ಚಹಾ ಪ್ರೀಯರಿಗೆ ನಿಜಕ್ಕೂ ದೊಡ್ಡ ಸವಾಲು. ಆದರೆ ನಿಮ್ಮ ಆರೋಗ್ಯ ದೃಷ್ಟಿಯಿಂದ ಮನಸ್ಸನ್ನು ಗಟ್ಟಿಮಾಡಿಕೊಂಡು ಇದನ್ನು ಮಾಡಬಹುದು. ಸಾಮಾನ್ಯವಾಗಿ ನಾವು ಕುಡಿಯುವ ಚಹಾದಲ್ಲಿ ಸಕ್ಕರೆ ಅಧಿಕವಾಗಿರುತ್ತದೆ. ಇದು ಕ್ಯಾಲೊರಿಗಳನ್ನು ಹೆಚ್ಚಿಸುತ್ತದೆ. ಅಲ್ಲದೆ ಆರೋಗ್ಯ ತಜ್ಞರ ಪ್ರಕಾರ, ಚಹಾದಲ್ಲಿ ಸಕ್ಕರೆ ಪ್ರಮಾಣ ಅಧಿಕವಾಗಿರುತ್ತದೆ, ಇದು ಜೀರ್ಣಾಂಗ ವ್ಯವಸ್ಥೆಯನ್ನು ಹಾನಿಗೊಳಿಸುತ್ತದೆ. ಹಾಗಾಗಿ ನೀವು ಒಂದು ತಿಂಗಳ ಕಾಲ ಸಿಹಿ ಚಹಾ ಕುಡಿಯುವುದನ್ನು ನಿಲ್ಲಿಸಿದರೆ ನಿಮ್ಮ ಜೀರ್ಣಕ್ರಿಯೆ ಸುಧಾರಿಸುತ್ತದೆ.
ನರೇಗಾ ಕೂಲಿ ಕಾರ್ಮಿಕರು ಕರೆದೊಯ್ಯುತ್ತಿದ್ದ ಗೂಡ್ಸ್ ವಾಹನ ಪಲ್ಟಿ ; 25ಕ್ಕೂ ಹೆಚ್ಚು ಜನರಿಗೆ ಗಾಯ
ಸಾಮಾನ್ಯವಾಗಿ ಒಂದು ತಿಂಗಳ ಕಾಲ ಸಿಹಿ ಚಹಾವಿಲ್ಲದೆ ಇರುವುದು ನಿಮ್ಮ ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ ಎಂಬುದು ಹಲವಾರು ಸಂಶೋಧನೆಗಳಿಂದ ಸಾಬೀತಾಗಿದೆ. ಅತಿಯಾಗಿ ಸಿಹಿಯಾಗಿರುವ ಚಹಾ ಸೇವನೆಯು ಚರ್ಮದ ಮೇಲೆ ಮೊಡವೆ ಮತ್ತು ಗುಳ್ಳೆಗಳನ್ನು ಉಂಟು ಮಾಡುತ್ತದೆ. ಹಾಗಾಗಿ ನೀವು ನಿಮ್ಮ ಚರ್ಮವನ್ನು ಆರೋಗ್ಯಕರವಾಗಿಡಲು ಬಯಸಿದಲ್ಲಿ ಸಿಹಿ ಚಹಾವನ್ನು ಕುಡಿಯದಿರುವುದು ಉತ್ತಮ
ಅಲ್ಲದೆ ಒಂದು ತಿಂಗಳ ಕಾಲ ಚಹಾ ಕುಡಿಯದಿದ್ದರೆ ದೇಹದಲ್ಲಿನ ಕೆಫೀನ್ ಪ್ರಮಾಣವನ್ನು ಕಡಿಮೆ ಮಾಡುತ್ತದೆ. ಇದು ಉತ್ತಮ ನಿದ್ರೆ ಮಾಡಲು ಸಹಾಯ ಮಾಡುತ್ತದೆ. ಜೊತೆಗೆ ಇದು ನಮ್ಮ ಒತ್ತಡವನ್ನು ಸಹ ಕಡಿಮೆ ಮಾಡುತ್ತದೆ.
ನೀವು ಒಂದು ತಿಂಗಳ ಕಾಲ ಸಿಹಿ ಚಹಾವನ್ನು ಕುಡಿಯದಿದ್ದರೆ, ನಿರ್ಜಲೀಕರಣಕ್ಕೆ ಸಂಬಂಧಿಸಿದ ಸಮಸ್ಯೆಗಳು ಕಡಿಮೆಯಾಗುತ್ತದೆ. ಅಲ್ಲದೆ ಇದು ಜೀವಕೋಶಗಳಿಗೆ ಹಾನಿ ಮಾಡುವ ಫ್ರೀ ರಾಡಿಕಲ್ಗಳನ್ನು ಸಹ ಕಡಿಮೆ ಮಾಡುತ್ತದೆ
ಜೊತೆಗೆ ತೂಕವು ಕಡಿಮೆಯಾಗುತ್ತದೆ. ಅಷ್ಟೇ ಅಲ್ಲ ಹಲವಾರು ರೀತಿಯ ಆರೋಗ್ಯ ಸಮಸ್ಯೆಗಳು ನಿಮ್ಮ ಹತ್ತಿರವೂ ಸುಳಿಯುವುದಿಲ್ಲ. ಹಾಗಾದರೆ ಇದರಿಂದ ಸಿಗುವ ಇನ್ನಿತರ ಪ್ರಯೋಜನಗಳೇನು? ಇಲ್ಲಿದೆ ಮಾಹಿತಿ.