ಬೆಂಗಳೂರು:- ಕರ್ನಾಟಕ ಸರ್ಕಾರವು ಹೊಸ ಕಾರು ಮತ್ತು ಬೈಕ್ ಖರೀದಿಸುತ್ತಿದ್ದವರಿಗೆ ಬಿಗ್ ಶಾಕ್ ಕೊಟ್ಟಿದೆ.
Breaking News: ಮಹಾ ಕುಂಭಮೇಳದಲ್ಲಿ ಭಾರೀ ಅವಘಡ! ಕಾಲ್ತುಳಿತದಿಂದ 10 ಸಾವು!
ಹೊಸ ಕಾರು ಖರೀದಿ ಮಾಡುವವರು ಒಂದು ಸಾವಿರ ರೂಪಾಯಿ, ಹೊಸದಾಗಿ ಬೈಕ್ ಖರೀದಿ ಮಾಡುವವರು 500 ರೂಪಾಯಿಯನ್ನು ಹೆಚ್ಚುವರಿಯಾಗಿ ಸೆಸ್ ರೂಪದಲ್ಲಿ ಸಾರಿಗೆ ಇಲಾಖೆಗೆ ಪಾವತಿ ಮಾಡಬೇಕು.
ಮೋಟಾರು ಸಾರಿಗೆ ಮತ್ತು ಇತರ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ನಿಧಿಯ ಉದ್ದೇಶಕ್ಕಾಗಿ, ಸಾರಿಗೇತರ ವಾಹನಗಳ ನೋಂದಣಿ ಸಮಯದಲ್ಲಿ ದ್ವಿಚಕ್ರ ವಾಹನಗಳಿಗೆ 500 ರೂಪಾಯಿ, ಮೋಟಾರು ಕಾರುಗಳಿಗೆ 1 ಸಾವಿರ ರೂಪಾಯಿಗಳನ್ನು ಸಂಗ್ರಹಿಸಲಾಗುತ್ತದೆ. ಯೆಲ್ಲೋ ಬೋರ್ಡ್ ವಾಹನಗಳನ್ನು ಖರೀದಿ ಮಾಡುವವರ ಬಳಿ ಸೆಸ್ ಸಂಗ್ರಹ ಮಾಡುವಂತಿಲ್ಲ ಎಂದು ರಾಜ್ಯ ಸಾರಿಗೆ ಇಲಾಖೆ ತನ್ನ ಅಧಿಕೃತ ಆದೇಶದಲ್ಲಿ ಉಲ್ಲೇಖಿಸಿದೆ.