ಖಾಲಿ ಹೊಟ್ಟೆಯಲ್ಲಿ ಮೊಸರು ತಿನ್ನುವುದರಿಂದ ಯಾವ ರೋಗಗಳು ಬರುವುದಿಲ್ಲ? ಇದು ದೇಹಕ್ಕೆ ಎಷ್ಟು ಒಳ್ಳೆಯದು? ಇಲ್ಲಿದೆ ಸಂಪೂರ್ಣ ಮಾಹಿತಿ.
ಮೊಸರನ್ನು ತಿನ್ನುವುದರಿಂದ ಜೀರ್ಣಕ್ರಿಯೆ ಸರಾಗವಾಗಿ ಆಗುತ್ತದೆ. ಜೊತೆಗೆ ಹೊಟ್ಟೆಗೆ ಸಂಬಂಧಿತ ಸಮಸ್ಯೆಗಳನ್ನು ನಿವಾರಿಸುತ್ತದೆ. ಹಾಲು ಕುಡಿಯಲು ಇಷ್ಟಪಡದವರು ಮೊಸರು ತಿನ್ನಬಹುದು. ಇದರಲ್ಲಿರುವ ಕ್ಯಾಲ್ಸಿಯಂ, ವಿಟಮಿನ್ ಬಿ -12, ವಿಟಮಿನ್ ಬಿ -2, ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್ ನಂತಹ ಪೋಷಕಾಂಶಗಳು ನಿಮ್ಮ ದೇಹ ಆರೋಗ್ಯವಾಗಿರಲು ಸಹಾಯ ಮಾಡುತ್ತದೆ. ಬೇಸಿಗೆಯಲ್ಲಿ ಸ್ವಲ್ಪ ಸಕ್ಕರೆಯೊಂದಿಗೆ ಮೊಸರು ತಿನ್ನುವುದರಿಂದ ಹೊಟ್ಟೆಯೂ ತಂಪಾಗಿರುತ್ತದೆ. ಇದಲ್ಲದೆ, ಮೊಸರು ಪ್ರೋಬಯಾಟಿಕ್ಗಳಿಂದ ಸಮೃದ್ಧವಾಗಿರುವುದರಿಂದ ಕರುಳನ್ನು ಆರೋಗ್ಯಕರವಾಗಿರಿಸುತ್ತದೆ.
ಖಾಲಿ ಹೊಟ್ಟೆಯಲ್ಲಿ ಮೊಸರು ತಿನ್ನುವುದರಿಂದ ಅನೇಕ ರೋಗಗಗಳು ಬರದಂತೆ ತಡೆಯಬಹುದು. ಮೊಸರಿನಲ್ಲಿರುವ ಪ್ರೋಬಯಾಟಿಕ್ ಗಳು ಹೊಟ್ಟೆಗೆ ಸಂಬಂಧ ಪಟ್ಟ ಸೋಂಕು ಮತ್ತು ಅಜೀರ್ಣವನ್ನು ತಡೆಯುವ ಉತ್ತಮ ಬ್ಯಾಕ್ಟೀರಿಯಾಗಳಾಗಿವೆ. ಜೊತೆಗೆ ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸಿ ರೋಗಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಮೊಸರಿನಲ್ಲಿರುವ ಲ್ಯಾಕ್ಟೋಬಾಸಿಲಸ್ ಬ್ಯಾಕ್ಟೀರಿಯಾವು ಕರುಳಿನ ಕಿರಿಕಿರಿ, ಕರುಳಿನ ಉರಿಯೂತದ ಕಾಯಿಲೆಯಂತಹ ಜಠರಗರುಳಿನ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. ಇದೆಲ್ಲದರ ಜೊತೆಗೆ ಮಹಿಳೆಯರಲ್ಲಿ ಯೋನಿಗೆ ಸಂಬಂಧಿಸಿದ ಸೋಂಕುಗಳನ್ನು ತಡೆಯಲು ಸಹಕಾರಿಯಾಗಿದೆ. ಇದರಲ್ಲಿರುವ ಉತ್ತಮ ಬ್ಯಾಕ್ಟೀರಿಯಾವು ಯೋನಿಯ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಇವೆಲ್ಲಾ ಕಾರಣದಿಂದಾಗಿ ಬೆಳಿಗ್ಗೆ ಮೊಸರು ತಿನ್ನುವುದು ಒಳ್ಳೆಯದಾಗಿದೆ ಎನ್ನಲಾಗುತ್ತಿದೆ.